ನಮ್ಮ ಸರ್ಕಾರದ ಆಡಳಿತದಲ್ಲಿ ಕೈ ಹಾಕುವುದು ಬೇಡ: ಕೇರಳ ಸರ್ಕಾರಕ್ಕೆ ಡಿಕೆ ಶಿವಕುಮಾರ್ ಎಚ್ಚರಿಕೆ​

Edited By:

Updated on: Dec 30, 2025 | 3:57 PM

ಡಿಸಿಎಂ ಡಿಕೆ ಶಿವಕುಮಾರ್ ಅವರು ಕೇರಳ ಸರ್ಕಾರ ನಮ್ಮ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಸ್ಪಷ್ಟಪಡಿಸಿದ್ದಾರೆ. ರಾಜೀವ್ ಚಂದ್ರಶೇಖರ್ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ. ನಮಗೂ ಕೇರಳ ಗೂ ಅವಿನಾಭಾವ ಸಂಬಂಧ ಇದೆ. ರಾಜಕೀಯ ಮಾಡುವವರು ಮಾಡಿಕೊಳ್ಳಲಿ ಎಂದಿದ್ದಾರೆ.

ಬೆಂಗಳೂರು, ಡಿಸೆಂಬರ್​ 30: ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳು ನೆಲಸಮ ವಿಚಾರವಾಗಿ ಕೇರಳ ಸರ್ಕಾರ ಕಿಡಿಕಾರಿತ್ತು. ಈ ವಿಚಾರವಾಗಿ ಇದೀಗ ಡಿಸಿಎಂ ಡಿಕೆ ಶಿವಕುಮಾರ್​ ಕೇರಳ ಸರ್ಕಾರಕ್ಕೆ ಮತ್ತೊಮ್ಮೆ ಟಾಂಗ್​ ನೀಡಿದ್ದಾರೆ. ಕೇರಳ ಸರ್ಕಾರ ನಮ್ಮ ಸರ್ಕಾರದ ಆಡಳಿತದಲ್ಲಿ ಕೈ ಹಾಕುವುದು ಬೇಡ ಎಂದು ಹೇಳಿದ್ದಾರೆ. ತಮ್ಮ ಈ ಹಿಂದಿನ ಹೇಳಿಕೆಯನ್ನು ರಾಜೀವ್ ಚಂದ್ರಶೇಖರ್ ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Dec 30, 2025 03:55 PM