Bengaluru Stampede: ಸದನದಲ್ಲಿ ಶಿವಕುಮಾರ್​​ಗೆ ನನ್ನ ವಿರುದ್ಧ ಮಾತಾಡುವುದೇನಿದೆ? ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Jun 07, 2025 | 1:10 PM

ಪರಿಹಾರದ ವಿಷಯದಲ್ಲಿ ಕುಮಾರಸ್ವಾಮಿ ಸ್ಪಷ್ಟವಾದ ಪ್ರತಿಕ್ರಿಯೆ ನೀಡಲಿಲ್ಲ. ಕರ್ನಾಟಕ ಸರ್ಕಾರ ಮತ್ತು ಆರ್​ಸಿಬಿ ತಂಡದ ಮಾಲೀಕರು ಕಾಲ್ತುಳಿತದಲ್ಲಿ ಮಡಿದವರ ಕುಟುಂಬಗಳಿಗೆ ಹತ್ತತ್ತು ಲಕ್ಷ ರೂ. ನೀಡುತ್ತಿದ್ದಾರೆ, ಹಣ ಎಷ್ಟು ನೀಡಿದರೂ ಹೋದ ಜೀವವಂತೂ ವಾಪಸ್ಸು ಬರಲಾರದು, ವಿಶೇಷ ಪ್ರಕರಣ ಅಂತ ಪರಿಗಣಿಸಿ ಸರ್ಕಾರ ಏನು ತೀರ್ಮಾನ ತೆಗೆದುಕೊಳ್ಳುತ್ತೋ ನೋಡೋಣ ಎಂದು ಅವರು ಹೇಳಿದರು.

ಬೆಂಗಳೂರು, ಜೂನ್ 7: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಅಧಿವೇಶನದಲ್ಲಿ ನನ್ನ ಬಗ್ಗೆ ಮಾತಾಡುತ್ತೇನೆ ಅಂತ ಡಿಕೆ ಶಿವಕುಮಾರ್ (DK Shivakumar) ಹೇಳುತ್ತಿರುವುದರ ಅರ್ಥವೇನು, ಹಿಂದೆ ಅವರು ಏನು ಮಾತಾಡಿದ್ದಾರೆ ಅಂತ ಮುಂದೆ ಮಾತಾಡುತ್ತಾರೆ? ಅಧಿಕಾರಕ್ಕೆ ಬಂದ ಕಳೆದ ಎರಡು ವರ್ಷಗಳಲ್ಲಿ ಅವರು ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಬುಧವಾರ ನಡೆದ ಕಾಲ್ತುಳಿತದ ಪ್ರಕರಣ ಪಕ್ಕಕ್ಕಿಟ್ಟರೂ, ಬೆಂಗಳೂರು ನಗರ ಜಿಲ್ಲೆಗೆ ನೀಡಿರುವ ಕೊಡುಗೆಯಾದರೂ ಏನು ಅಂತ ಕುಮಾರಸ್ವಾಮಿ ಕೇಳಿದರು.

ಇದನ್ನೂ ಓದಿ:  Bengaluru Stampede; ದಕ್ಷರನ್ನು ಸಸ್ಪೆಂಡ್ ಮಾಡಿ ರಾಜ್ಯದ ಜನತೆಗೆ ಸರ್ಕಾರ ಕೆಟ್ಟ ಸಂದೇಶ ನೀಡಿದೆ: ಹೆಚ್ ಡಿ ಕುಮಾರಸ್ವಾಮಿ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.