Video: ಅವರು ಯಾವ ಗ್ರಹದಲ್ಲಿ ವಾಸಿಸುತ್ತಿದ್ದಾರೋ ಗೊತ್ತಿಲ್ಲ, ಪ್ರಿಯಾಂಕಾ ಗಾಂಧಿ ಹೇಳಿದ್ದು ಯಾರಿಗೆ?
ಅವರು ಯಾವ ಗ್ರಹದಲ್ಲಿ ವಾಸಿಸುತ್ತಿದ್ದಾರೋ ಗೊತ್ತಿಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರ ಸಂಸತ್ತಿನಲ್ಲಿ ಬಜೆಟ್ ಮೇಲಿನ ಸಾಮಾನ್ಯ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರ ಉತ್ತರಕ್ಕೆ ಪ್ರತಿಕ್ರಿಯಿಸುತ್ತಾ ತೀವ್ರ ವಾಗ್ದಾಳಿ ನಡೆಸಿದರು. ಅವರು ಯಾವ ಗ್ರಹದಲ್ಲಿ ವಾಸಿಸುತ್ತಿದ್ದಾರೋ ನನಗೆ ಗೊತ್ತಿಲ್ಲ, ಹಣದುಬ್ಬರವಿಲ್ಲ, ನಿರುದ್ಯೋಗ ಹೆಚ್ಚಿಲ್ಲ, ಬೆಲೆ ಏರಿಕೆ ಇಲ್ಲವೇ ಇಲ್ಲ ಎನ್ನುತ್ತಿದ್ದಾರೆ ಅವರಿಗೆ ಪ್ರಸ್ತುತ ಪರಿಸ್ಥಿತಿ ಬಗ್ಗೆ ತಿಳಿವಳಿಕೆ ಇಲ್ಲದಿರಬಹುದು ಎಂದು ಹೇಳಿದ್ದಾರೆ.
ಅವರು ಯಾವ ಗ್ರಹದಲ್ಲಿ ವಾಸಿಸುತ್ತಿದ್ದಾರೋ ಗೊತ್ತಿಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರ ಸಂಸತ್ತಿನಲ್ಲಿ ಬಜೆಟ್ ಮೇಲಿನ ಸಾಮಾನ್ಯ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರ ಉತ್ತರಕ್ಕೆ ಪ್ರತಿಕ್ರಿಯಿಸುತ್ತಾ ತೀವ್ರ ವಾಗ್ದಾಳಿ ನಡೆಸಿದರು.
ಅವರು ಯಾವ ಗ್ರಹದಲ್ಲಿ ವಾಸಿಸುತ್ತಿದ್ದಾರೋ ನನಗೆ ಗೊತ್ತಿಲ್ಲ, ಹಣದುಬ್ಬರವಿಲ್ಲ, ನಿರುದ್ಯೋಗ ಹೆಚ್ಚಿಲ್ಲ, ಬೆಲೆ ಏರಿಕೆ ಇಲ್ಲವೇ ಇಲ್ಲ ಎನ್ನುತ್ತಿದ್ದಾರೆ ಅವರಿಗೆ ಪ್ರಸ್ತುತ ಪರಿಸ್ಥಿತಿ ಬಗ್ಗೆ ತಿಳಿವಳಿಕೆ ಇಲ್ಲದಿರಬಹುದು ಎಂದು ಹೇಳಿದ್ದಾರೆ.
ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಾ ಸೀತಾರಾಮನ್, ಅಮೆರಿಕನ್ ಡಾಲರ್ ವಿರುದ್ಧ ಭಾರತೀಯ ರೂಪಾಯಿ ಕುಸಿತದ ಹಿಂದೆ ಹಲವು ದೇಶೀಯ ಮತ್ತು ಜಾಗತಿಕ ಕಾರಣಗಳಿವೆ ಎಂದು ಹೇಳಿದಾಗ ಪ್ರಿಯಾಂಕಾ ಈ ಹೇಳಿಕೆ ನೀಡಿದ್ದಾರೆ. ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದ ಅವಧಿಯಲ್ಲಿ, ಹಣದುಬ್ಬರವು ಎರಡಂಕಿಗಳಲ್ಲಿತ್ತು, ಶೇಕಡಾ 10 ಕ್ಕಿಂತ ಹೆಚ್ಚಿತ್ತು, ಆದರೆ ಪ್ರಸ್ತುತ ಅಂತಹ ಪರಿಸ್ಥಿತಿ ಇಲ್ಲ ಎಂದು ಅವರು ಹೇಳಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ