ಧರ್ಮ-ಅಧರ್ಮಗಳ ವ್ಯಾಖ್ಯಾನ ಮಾಡಲಾರೆ, ಚುನಾವಣೆಯಲ್ಲಿ ಸ್ಪರ್ಧೆ ಆರೋಗ್ಯಕರವಾಗಿರಬೇಕು: ಡಾ ಸಿಎನ್ ಮಂಜುನಾಥ್

Updated on: Mar 23, 2024 | 4:38 PM

ಕಳೆದ 8-10 ದಿನಗಳಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದೇನೆ, ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಂದುಗೂಡಿ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ ಮತ್ತು ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದರು. ರಾಜರಾಜೇಶ್ವರಿ ನಗರ ಮತ್ತು ಕುಣಿಗಲ್ ಗಳಲ್ಲಿ ಜನರಿಂದ ಅಭೂತಪೂರ್ವ ಸ್ವಾಗತ ಸಿಕ್ಕಿದೆ, ಕಾರ್ಯಕರ್ತರು ಅತ್ಯಂತ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಡಾ ಮಂಜುನಾಥ್ ಹೇಳಿದರು.

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ (Dr CN Manjunath) ಚುನಾವಣಾ ಪ್ರಚಾರ ಕಾರ್ಯ (electioneering) ಉತ್ಸಾಹದಿಂದ ಮಾಡುತ್ತಿದ್ದಾರೆ ಮತ್ತು ಅವರೇ ಹೇಳುವಂತೆ ಕ್ಷೇತ್ರದೆಲ್ಲೆಡೆ ಉತ್ತಮ ಪ್ರತಿಕ್ರಿಯೆ (response) ಸಿಗುತ್ತಿದೆ. ಇಂದು ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಕಳೆದ 8-10 ದಿನಗಳಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದೇನೆ, ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಂದುಗೂಡಿ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ ಮತ್ತು ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದರು. ರಾಜರಾಜೇಶ್ವರಿ ನಗರ ಮತ್ತು ಕುಣಿಗಲ್ ಗಳಲ್ಲಿ ಜನರಿಂದ ಅಭೂತಪೂರ್ವ ಸ್ವಾಗತ ಸಿಕ್ಕಿದೆ, ಕಾರ್ಯಕರ್ತರು ಅತ್ಯಂತ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಡಾ ಮಂಜುನಾಥ್ ಹೇಳಿದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಧರ್ಮ ಮತ್ತು ಅಧರ್ಮಗಳ ನಡುವಿನ ಹೋರಾಟ ಎಂದು ಹೇಳಲಾಗುತ್ತಿದೆ ಅದಕ್ಕೆ ತಾವೇನು ಹೇಳ್ತೀರಿ ಅಂತ ಕೇಳಿದಾಗ ಡಾ ಮಂಜುನಾಥ್, ಧರ್ಮ ಅಧರ್ಮಗಳ ವ್ಯಾಖ್ಯಾನ ತಾನು ಮಾಡಲ್ಲ ಅದರೆ, ಚುನಾವಣೆಗಳಲ್ಲಿ ಆರೋಗ್ಯಕರ ಸ್ಪರ್ಧೆ ನಡೆಯಬೇಕು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮೈತ್ರಿ ಅಸಮಾಧಾನ ಸರಿಪಡಿಸಲು ಬಿಜೆಪಿ ಹೈಕಮಾಂಡ್ ಕಸರತ್ತು: ಮೈಸೂರಿನಲ್ಲಿ ಮೋದಿ, ದೇವೇಗೌಡ ಬಹಿರಂಗ ಸಭೆಗೆ ಚಿಂತನೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More