AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಣ್ಣರ ಸೆಪ್ಟಂಬರ್ ಕ್ರಾಂತಿ ಹೇಳಿಕೆ ವಿಷಯದಲ್ಲಿ ಪ್ರತಿಕ್ರಿಯೆ ನೀಡಲಾರೆ, ಅವರು ದೊಡ್ಡೋರು: ವಿಜಯಾನಂದ ಕಾಶಪ್ಪನವರ್

ರಾಜಣ್ಣರ ಸೆಪ್ಟಂಬರ್ ಕ್ರಾಂತಿ ಹೇಳಿಕೆ ವಿಷಯದಲ್ಲಿ ಪ್ರತಿಕ್ರಿಯೆ ನೀಡಲಾರೆ, ಅವರು ದೊಡ್ಡೋರು: ವಿಜಯಾನಂದ ಕಾಶಪ್ಪನವರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jun 28, 2025 | 4:42 PM

Share

ತಾನು ಯಾವುದೇ ಲಾಬಿ ಮಾಡಲು ಬೆಂಗಳೂರಿಗೆ ಬಂದಿಲ್ಲ, ಕ್ಷೇತ್ರದ ಅಬಿವೃದ್ಧಿ ಕಾರ್ಯಗಳ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ಬಂದಿದ್ದೆ, ತಾನ್ಯಾವತ್ತು ಅಧಿಕಾರದ ಹಿಂದೆ ಬೆನ್ನತ್ತಿದ್ದವನಲ್ಲ, ಮಂತ್ರಿ ಸ್ಥಾನ ಬರಬೇಕಾದ ಸಮಯದಲ್ಲಿ ಬಂದೇ ಬರುತ್ತೆ ಎಂದು ಶಾಸಕ ಕಾಶಪ್ಪನವರ್ ಹೇಳಿದರು.

ಬೆಂಗಳೂರು, ಜೂನ್ 28: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಹುನುಗುಂದ ಶಾಸಕ ವಿಜಯಾನಂದ ಕಾಶಪ್ಪನವರ್, ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ಅವರ ಸೆಪ್ಟಂಬರ್ ಕ್ರಾಂತಿ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಗೋಜಿಗೆ ಹೋಗಲಿಲ್ಲ. ಅವರು ಹಿರಿಯರು, ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲಾರೆ, ನಾನೊಂದು ಜವಾಬ್ದಾರಿಯುತ ಸ್ಥಾನದಲ್ಲಿರುವವನು ಮತ್ತು ನನ್ನ ಕುಟುಂಬ ಸುಮಾರು 50 ವರ್ಷಗಳಿಂದ ರಾಜಕಾರಣದಲ್ಲಿದೆ, ಬದಲಾಣೆಯ ಬಗ್ಗೆ ಊಹಾಪೋಹಗಳು ಎಲ್ಲಿಂದ ಹುಟ್ಟಿದವು ಯಾಕೆ ಹುಟ್ಟಿದವು ಅಂತೆಲ್ಲ ಗೊತ್ತಿದೆ, ಬದಲಾವಣೆ ಆಗಬೇಕಾದರೆ ಅದನ್ನು ಹೈಕಮಾಂಡ್ ಮಾಡುತ್ತದೆ, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜೀವ್ ಗಾಂಧಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಕಾಶಪ್ಪನವರ್ ಹೇಳಿದರು.

ಇದನ್ನೂ ಓದಿ:  ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಬಹುದಾದ ಸಾಧ್ಯತೆಯನ್ನೇ ರಾಜಣ್ಣ ಕ್ರಾಂತಿ ಎಂದಿರಬಹುದು: ಪಾಟೀಲ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.