ಸಿಎಂ ಕುರ್ಚಿ ಕದನ: ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ದೆಹಲಿಯಲ್ಲಿ ಮಾತನಾಡಿದ ಪ್ರಣವಾನಂದ ಸ್ವಾಮೀಜಿಗಳು ಡಿ.ಕೆ. ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿ.ಕೆ. ಶಿವಕುಮಾರ್ ಪಾತ್ರ ಮಹತ್ವದ್ದು. ಹೈಕಮಾಂಡ್ ಮುಖ್ಯಮಂತ್ರಿ ಆಯ್ಕೆ ಗೊಂದಲವನ್ನು ಕೂಡಲೇ ನಿವಾರಿಸಬೇಕು ಎಂದು ಒತ್ತಾಯಿಸಿದ್ದಾರೆ. ಸ್ವಾಮೀಜಿಗಳಿಗೆ ರಾಜಕೀಯ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದಿದ್ದಾರೆ.
ದೆಹಲಿ, ಡಿಸೆಂಬರ್ 23: ವೋಟ್‌ಗೆ ನಾವು ಬೇಕು, ಸಿಎಂ ಯಾರಾಗಬೇಕು ಎನ್ನುವ ಅಭಿಪ್ರಾಯ ಹೇಳಬಾರ್ದಾ? ರಾಜಕೀಯ ವಿಷಯಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಭಾರತದ ಸಂವಿಧಾನ ಸ್ವಾಮೀಜಿಗಳಿಗೆ ಹಕ್ಕು ನೀಡಿದೆ ಎಂದು ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ. ದೆಹಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿ, ಡಿ.ಕೆ. ಶಿವಕುಮಾರ್ ಭಾರತೀಯ ಸಂಸ್ಕೃತಿಯನ್ನು ಮೈಗೂಡಿಸಿಕೊಂಡ ರಾಜಕಾರಣಿ. ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಡಿಕೆ ಶಿವಕುಮಾರ್ರನ್ನು ಸಿಎಂ ಮಾಡುವಂತೆ ಒತ್ತಾಯಿಸಲಾಗುವುದು ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
