ಒಂದೇ ರಾತ್ರಿಯಲ್ಲಿ ದೂದ್​ಗಂಗಾ ನದಿಯಲ್ಲಿ 20 ಅಡಿ ಏರಿಕೆ!

Updated on: Jul 07, 2026 | 1:37 PM

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ದೂದ್‌ಗಂಗಾ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಕಳೆದ ಒಂದೇ ರಾತ್ರಿಯಲ್ಲಿ ದೂದ್‌ಗಂಗಾ ನದಿಯಲ್ಲಿ ಬರೋಬ್ಬರಿ 20 ಅಡಿಗಳಷ್ಟು ನೀರು ಏರಿಕೆ ಆಗಿದ್ದು, ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಬೆಳಗಾವಿ, ಜುಲೈ 07: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ದೂದ್‌ಗಂಗಾ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಕಳೆದ ಒಂದೇ ರಾತ್ರಿಯಲ್ಲಿ ದೂದ್‌ಗಂಗಾ ನದಿಯಲ್ಲಿ ಬರೋಬ್ಬರಿ 20 ಅಡಿಗಳಷ್ಟು ನೀರು ಏರಿಕೆ ಆಗಿದ್ದು, ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಪ್ರಸ್ತುತ ಹತ್ತು ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ಮಲ್ಲಿಕವಾಡ ಮತ್ತು ದತ್ತವಾಡ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆಯೂ ಸಂಪೂರ್ಣವಾಗಿ ಮುಳುಗಿದ್ದು, ಸೇತುವೆಯ ಮೇಲ್ಭಾಗದಲ್ಲಿ ನೀರು ಹರಿಯುತ್ತಿದೆ. ಇದರಿಂದ ಈ ಎರಡು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ನದಿ ಪಾತ್ರದ ಜಮೀನುಗಳಲ್ಲಿನ ಬೆಳೆಗಳು ಮುಳುಗಡೆಯಾಗುವ ಭೀತಿ ಎದುರಾಗಿದ್ದು, ರೈತರು ತಮ್ಮ ಜಾನುವಾರುಗಳಿಗೆ ಮೇವನ್ನು ಕಟಾವು ಮಾಡಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.

ಪ್ರವಾಹದ ಈ ಸ್ಥಿತಿ ಮುಂದುವರಿದರೆ ಮಲ್ಲಿಕವಾಡ ಸೇರಿದಂತೆ ನದಿ ತೀರದ ಗ್ರಾಮಗಳಿಗೆ ನೀರು ನುಗ್ಗುವ ಸಾಧ್ಯತೆಯಿದೆ ಎಂದು ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಕಡಿಮೆಯಾಗದಿದ್ದರೆ ಚಿಕ್ಕೋಡಿ ಭಾಗದ ಜನರಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us