DPL 2025: ಒಂದೇ ಪಂದ್ಯದಲ್ಲಿ ಮಿಂಚಿದ ಮೂವರು ‘ರಾವತ್’..!
170 ರನ್ಗಳ ಗುರಿಯನ್ನು ಬೆನ್ನತ್ತಿದ ಈಸ್ಟ್ ಡೆಲ್ಲಿ ರೈಡರ್ಸ್ ಪರ ಅನೂಜ್ ರಾವತ್ 35 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 55 ರನ್ ಬಾರಿಸಿದರು. ಇನ್ನು ಅನೂಜ್ಗೆ ಉತ್ತಮ ಸಾಥ್ ನೀಡಿದ ಮಯಾಂಕ್ ರಾವತ್ 30 ರನ್ ಚಚ್ಚಿದರು. ಈ ಇಬ್ಬರು ರಾವತ್ಗಳ ಜೊತೆಯಾಟದೊಂದಿಗೆ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 173 ರನ್ಗಳ ಗುರಿ ಮುಟ್ಟಿತು.
ಡೆಲ್ಲಿ ಪ್ರೀಮಿಯರ್ ಲೀಗ್ ಸೀಸನ್-2 ಶುರುವಾಗಿದೆ. ಮೊದಲ ಪಂದ್ಯದಲ್ಲಿ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ವಿರುದ್ಧ ಈಸ್ಟ್ ಡೆಲ್ಲಿ ರೈಡರ್ಸ್ ಭರ್ಜರಿ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ಪರ ಸಾರ್ಥಕ್ ರೇ 41 ರನ್ ಬಾರಿಸಿದರು. ಇನ್ನು ಕೆಳ ಕ್ರಮಾಂಕದಲ್ಲಿ ಅಭಿಷೇಕ್ 40 ರನ್ಗಳ ಕೊಡುಗೆ ನೀಡಿದರು. ಈ ಮೂಲಕ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಿತು.
170 ರನ್ಗಳ ಗುರಿಯನ್ನು ಬೆನ್ನತ್ತಿದ ಈಸ್ಟ್ ಡೆಲ್ಲಿ ರೈಡರ್ಸ್ ಪರ ಅನೂಜ್ ರಾವತ್ 35 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 55 ರನ್ ಬಾರಿಸಿದರು. ಇನ್ನು ಅನೂಜ್ಗೆ ಉತ್ತಮ ಸಾಥ್ ನೀಡಿದ ಮಯಾಂಕ್ ರಾವತ್ 30 ರನ್ ಚಚ್ಚಿದರು. ಈ ಇಬ್ಬರು ರಾವತ್ಗಳ ಜೊತೆಯಾಟದೊಂದಿಗೆ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 173 ರನ್ಗಳ ಗುರಿ ಮುಟ್ಟಿತು.
ಇತ್ತ ಈಸ್ಟ್ ಡೆಲ್ಲಿ ರೈಡರ್ಸ್ ಪರ ಬ್ಯಾಟಿಂಗ್ನಲ್ಲಿ ಅನೂಜ್ ರಾವತ್ ಹಾಗೂ ಮಯಾಂಕ್ ರಾವತ್ ಮಿಂಚಿದರೆ, ಅತ್ತ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ಪರ ಬೌಲಿಂಗ್ನಲ್ಲಿ ದಿವಂಶ್ ರಾವತ್ 3 ವಿಕೆಟ್ ಕಬಳಿಸಿದರು. ಈ ಮೂಲಕ ಒಂದೇ ಪಂದ್ಯದಲ್ಲಿ ಮೂವರು ರಾವತ್ಗಳು ಗಮನ ಸೆಳೆದರು.
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ