ಮಹಾದೇವಪ್ಪ ಲೋಕೋಪಯೋಗಿ ಸಚಿವನಾಗಿದ್ದಾಗ ಸಿಗಂದೂರು ಸೇತುವೆ ಡಿಪಿಆರ್ ರೆಡಿಯಾಗಿತ್ತು: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Jul 14, 2025 | 7:44 PM

ಮತ್ತೊಂದು ಪ್ರಶ್ನೆಗೆ ಉತ್ತರಿಸುತ್ತಾ ಮಾತಾಡಿದ ಸಿದ್ದರಾಮಯ್ಯ ಒಬಿಸಿ ಕೌನ್ಸಿಲ್​ಗೆ ತಾನೂ ಒಬ್ಬ ಸದಸ್ಯನಾಗಿದ್ದೇನೆ, ಈ ಬಾರಿಯ ಮೀಟಿಂನ್ನು ತಾನು ಬೆಂಗಳೂರಲ್ಲಿ ಆಯೋಜಿಸುತ್ತಿರುವುದಾಗಿ ಹೇಳಿದರು. ಅಹಿಂದ ಸಂಘಟನೆಯನ್ನು ಬಹಳ ಹಿಂದೆಯೇ ಆರಂಭಿಸಿರುವೆನೆಂದ ಮುಖ್ಯಮಂತ್ರಿ, ಮೀಟಿಂಗ್ ನಲ್ಲಿ ಹಿಂದುಳಿದ ವರ್ಗಗಳ ಒಲವು ಹೇಗೆ ಪಡೆಯಬೇಕೆನ್ನುವುದನ್ನು ಚರ್ಚಿಸಲಾಗುವುದು ಎಂದು ಹೇಳಿದರು.

ವಿಜಯಪುರ, ಜುಲೈ 14: ಜಿಲ್ಲೆಯ ಇಂಡಿ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ತಮ್ಮನ್ನು ಅಹ್ವಾನಿಸದೆ ಸಿಗಂದೂರು ಚೌಡೇಶ್ವರಿ ಸೇತುವೆಯನ್ನು ಉದ್ಘಾಟಿಸಲಾಗಿದೆ, ಆಹ್ವಾನ ಪತ್ರಿಕೆಯಲ್ಲಿ ತನ್ನ ಹೆಸರಿರೋದು ನಿಜ, ಆದರೆ ಭೂ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ತನ್ನನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ, ರಾಜ್ಯದ ಮುಖ್ಯಮಂತ್ರಿ ಯಾರು ಎಂದು ಅಸಮಧಾನ ವ್ಯಕ್ತಪಡಿಸಿದರು. ಪ್ರತಿಭಟನೆಯ ಭಾಗವಾಗಿಯೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ, ಮಹದೇವಪ್ಪ ಅವರು ಲೋಕೋಪಯೋಗಿ ಖಾತೆ ಸಚಿವರಾಗಿದ್ದಾಗ ಯೋಜನೆ ಡಿಪಿಆರ್ ತಯಾರಾಗಿತ್ತು, ಅದು ಬಹು ದೊಡ್ಡ ಯೋಜನೆಯಾಗಿದ್ದರಿಂದ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಇಲಾಖೆಗೆ ವರ್ಗಾಯಿಸಲಾಗಿತ್ತು, ಸಹಕಾರಿ ಒಕ್ಕೂಟ ವ್ಯವಸ್ಥೆ ಅಂದರೆ ಇದೇನಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಇದನ್ನೂ ಓದಿ:     ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ಸಿಗಂದೂರು ಚೌಡೇಶ್ವರಿ ಸೇತುವೆ ಅಂತ ನಾಮಕರಣ ಮಾಡಿದ ನಿತಿನ್ ಗಡ್ಕರಿ

ವಿಡಿಯೋ ಸುದ್ದಿಗಳಿಗಾಗು ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.