ಮುನಿರತ್ನರನ್ನು ಇನ್ನೂ ಯಾಕೆ ಉಚ್ಚಾಟಿಸಿಲ್ಲ ಅಂತ ಕೇಳಿದರೆ ಅಶ್ವಥ್ ನಾರಾಯಣ ಸಮಂಜಸ ಉತ್ತರ ನೀಡಲಿಲ್ಲ

ಅರುಣ್​ ಕುಮಾರ್​ ಬೆಳ್ಳಿ

Updated on: May 28, 2025 | 4:09 PM

ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತಾಡಿದ ಅಶ್ವಥ್ ನಾರಾಯಣ, ಕಾಂಗ್ರೆಸ್ ಕೇವಲ ಅಧಿಕಾರಕ್ಕೆ ಬರಲು ಜನರಿಗೆ ಇಲ್ಲದ ಆಮಿಶಗಳನ್ನೊಡ್ಡಿ, ಅವರ ಕೈಕಾಲು ಹಿಡಿಯಿತು, ಈಗ ಯೋಜನೆಗಳ ವಿಷಯದಲ್ಲಿ ಯೂ-ಟರ್ನ್ ಹೊಡೆಯುವ ಹುನ್ನಾರ ನಡೆಸಿದೆ, ಅದನ್ನೇ ಮಾಡೋದಾದರೆ ಸರ್ಕಾರ ವಿಧಾನ ಸಭೆಯನ್ನು ವಿಸರ್ಜಿಸಿ ಮತದಾರರಿಗೆ ಆಮಿಷಗಳನ್ನೊಡದೆ ಚುನಾವಣೆ ಎದುರಿಸಲಿ ಎಂದು ಸವಾಲೊಡ್ಡಿದರು.

ಬೆಂಗಳೂರು, ಮೇ 28: ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನಿನ್ನೆ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ (Shivaram Hebbar) ಅವರನ್ನು 6-ವರ್ಷ ಅವಧಿಗೆ ಉಚ್ಚಾಟನೆ ಮಾಡಿರುವ ಬಗ್ಗೆ ಪ್ರತಿಕ್ರಿಯೆಗಳು ಇವತ್ತು ಕೂಡ ವ್ಯಕ್ತವಾಗುತ್ತಿವೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಅ ಇಬ್ಬರು ಶಾಸಕರು ತೊಡಗಿದ್ದರು, ಹಾಗಾಗಿ ಶಿಸ್ತು ಸಮಿತಿ ಪಕ್ಷದಿಂದ ಉಚ್ಚಾಟಿಸಿದೆ ಎಂದು ಮಾಧ್ಯಮಗಳೊಂದಿಗೆ ಮಾತಾಡಿದ ಬಿಜೆಪಿ ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ ಹೇಳಿದರು. ಅದರೆ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಎಫ್​ಐಅರ್ ಆಗಿರುವ ಮುನಿರತ್ನ ಅವರನ್ನು ಪಕ್ಷದಲ್ಲಿ ಉಳಿಸಿಕೊಂಡಿರುವ ಬಗ್ಗೆ ಕೇಳಿದಾಗ ಶಾಸಕ ಸಮಂಜಸ ಪ್ರತಿಕ್ರಿಯೆ ನೀಡಲಿಲ್ಲ,

ಇದನ್ನೂ ಓದಿ:    ಈ ಸರ್ಕಾರ ಅಧಿಕಾರದಲ್ಲಿದ್ದರೆ ಹೆಚ್ಎಂಪಿವಿಯಿಂದ ಭಗವಂತನೇ ಜನರನ್ನು ಕಾಪಾಡಬೇಕು: ಡಾ ಸಿಎನ್ ಅಶ್ವಥ್ ನಾರಾಯಣ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.