ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿ ಹರಡುವವರ ವಿರುದ್ಧ ಕ್ರಮ; ಡಾ.ಜಿ ಪರಮೇಶ್ವರ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 22, 2023 | 2:19 PM

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿ ಹರಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರ ವಿರುದ್ದ ಕ್ರಮಗಳನ್ನ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್​ ಹೇಳಿದರು.

ಬೆಂಗಳೂರು, ಜು.22: ಸಾಮಾಜಿಕ ಜಾಲತಾಣ(Social Media)ಗಳಲ್ಲಿ ನಕಲಿ ಸುದ್ದಿ ಹರಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರ ವಿರುದ್ದ ಕ್ರಮಗಳನ್ನ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ(Dr. G. Parameshwara)​ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ನಾವು ಕೈ ಕಟ್ಟಿ ಕುಳಿತಿಲ್ಲ. ಈಗಾಗಲೇ ಸರ್ಕಾರವಾಗಿರಬಹುದು ಅಥವಾ ಸರ್ಕಾರ ಹೊರತುಪಡಿಸಿ ವೈಯಕ್ತಿಕವಾಗಿ ಕೂಡ ನಿಂದನೆ ಮಾಡುತ್ತಿದ್ದಾರೆ. ಅದನ್ನೇಲ್ಲವನ್ನು ಕೂಡ ನಿಲ್ಲಿಸಲು ಪ್ರಯತ್ನ ಪಡುತ್ತಿದ್ದು, ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು. ಜೊತೆಗೆ ಈಗಾಗಲೇ ರಾಜ್ಯದಲ್ಲಿ ಅಂದಾಜು 18 ಪ್ರಕರಣಗಳು ಇದ್ದು, 7 ಎಫ್​ಐಆರ್​ ಆಗಿವೆ. ಆ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

Published on: Jul 22, 2023 02:18 PM