ಸಿಎಂ ಆಕಾಂಕ್ಷಿಯಾಗಿದ್ದ ಪರಮೇಶ್ವರ್ ಡಿಸಿಎಂ ಆಗಿ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

Updated on: Jun 03, 2026 | 4:54 PM

ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಬಳಿಕ ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಡಾ ಜಿ ಪರಮೇಶ್ವರ್ (Dr G Parameshwar) ಅವರು ಇದೀಗ ಡಿಕೆ ಶಿವಕುಮಾರ್ ಕ್ಯಾಬಿನೆಟ್​​​ನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಪರಮೇಶ್ವರ್ ಅವರು ಡಾ, ಬಿಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವನಚ ಸ್ವೀಕರಿಸಿದರು.

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಬಳಿಕ ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಡಾ ಜಿ ಪರಮೇಶ್ವರ್ (Dr G Parameshwar) ಅವರು ಇದೀಗ ಡಿಕೆ ಶಿವಕುಮಾರ್ ಕ್ಯಾಬಿನೆಟ್​​​ನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಪರಮೇಶ್ವರ್ ಅವರು ಡಾ, ಬಿಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವನಚ ಸ್ವೀಕರಿಸಿದರು.

ಇನ್ನು ಒಟ್ಟು 5ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಡಾ.ಜಿ.ಪರಮೇಶ್ವರ್, 1989ರಲ್ಲಿ ಮಧುಗಿರಿಯಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದ್ರು. 1993ರಲ್ಲಿ ಮೊಯ್ಲಿ ಸಂಪುಟದಲ್ಲಿ ರೇಷ್ಮೆ ಸಚಿವರಾಗಿ ಸೇವೆ ಸಲ್ಲಿಸಿದ್ರು. 1999 ಮತ್ತು 2004ರಲ್ಲಿ ಮಧುಗಿರಿಯಲ್ಲಿ ಮತ್ತೆ ಗೆಲುವು ಸಾಧಿಸಿದ್ರು. 2008ರಲ್ಲಿ ಕ್ಷೇತ್ರ ಬದಲಾಯಿಸಿ ಕೊರಟಗೆರೆಯಿಂದ ಸ್ಪರ್ಧಿಸಿದ್ದರು. 2010ರಿಂದ 2018ರವರೆಗೂ KPCC ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಪರಮೇಶ್ವರ್, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಡಿಸಿಎಂ ಆಗಿದ್ರು. ಗೃಹ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ವಿಜ್ಞಾನತಂತ್ರಜ್ಞಾನ ಸಚಿವರಾಗಿ, ಬೆಂಗಳೂರು ಅಭಿವೃದ್ಧಿ ಸಚಿವರಾಗಿಯೂ ಪರಮೇಶ್ವರ್‌ ಸೇವೆ ಸಲ್ಲಿಸಿದ್ದಾರೆ.

Published on: Jun 03, 2026 04:54 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More