Exam Success Tips: ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಡಾ. ಗುರುರಾಜ್ ಕರಜಗಿ ಅವರು ಮಕ್ಕಳ ಪರೀಕ್ಷಾ ಸಂದರ್ಭದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ಪೋಷಕರು ಒತ್ತಡ ಹೇರಬಾರದು, ಬದಲಿಗೆ ಮಕ್ಕಳಿಗೆ ಶಾಂತವಾದ ವಾತಾವರಣ ಒದಗಿಸಬೇಕು. ವಿದ್ಯಾರ್ಥಿಗಳು ಆತಂಕವಿಲ್ಲದೆ ಓದಬೇಕು, ಧ್ಯಾನ, ಪ್ರಾಣಾಯಾಮ, ವ್ಯಾಯಾಮ ಮತ್ತು ಸಮರ್ಪಕ ಅಧ್ಯಯನ ತಂತ್ರಗಳನ್ನು ಅಳವಡಿಸಿಕೊಳ್ಳಬೇಕು. ವಿಶ್ರಾಂತಿಯು ನೆನಪಿನ ಶಕ್ತಿಯನ್ನು ಹೆಚ್ಚಿಸಿ ಉತ್ತಮ ಫಲಿತಾಂಶಕ್ಕೆ ಸಹಕರಿಸುತ್ತದೆ.
ಖ್ಯಾತ ಶಿಕ್ಷಣ ತಜ್ಞರಾದ ಡಾ.ಗುರುರಾಜ ಕರ್ಜಗಿ ಯವರು ಟಿವಿ9ನ ವಿಶೇಷ ಪಾಡ್‌ಕಾಸ್ಟ್‌ನಲ್ಲಿ ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾಗಿರುವುದು ಏನು ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಪರೀಕ್ಷೆ ಎನ್ನುವುದು ಮಕ್ಕಳ ಜೀವನದ ಒಂದು ಅವಿಭಾಜ್ಯ ಅಂಗ. ಆದರೆ, ಪರೀಕ್ಷಾ ಸಮಯದಲ್ಲಿ ಪೋಷಕರು ತಮ್ಮ ಮಕ್ಕಳ ಮೇಲೆ ಒತ್ತಡ ಹಾಕುವುದನ್ನು ನಿಲ್ಲಿಸಬೇಕು. ಮಾನಸಿಕ ಒತ್ತಡವು ಓದಿದ ವಿಷಯಗಳನ್ನು ನೆನಪಿಸಿಕೊಳ್ಳಲು ಅಡ್ಡಿಪಡಿಸುತ್ತದೆ. ಧ್ಯಾನ ಮತ್ತು ಪ್ರಾಣಾಯಾಮವು ಮನಸ್ಸಿನ ವಿಶ್ರಾಂತಿಗೆ ಉತ್ತಮ ಮಾರ್ಗವಾಗಿದೆ. ಪೋಷಕರು ಮಕ್ಕಳ ಜೊತೆ ಕುಳಿತುಕೊಳ್ಳಿ, ಆದರೆ “ಓದಿದ್ದೀಯಾ?” ಎಂದು ಪದೇ ಪದೇ ಕೇಳಿ ಒತ್ತಡ ಹೇರಬಾರದು. ಮಕ್ಕಳಿಗೆ ತಮ್ಮ ಸಾಮರ್ಥ್ಯದ ಬಗ್ಗೆ ಅರಿವಿರುತ್ತದೆ; ಅನಗತ್ಯ ಒತ್ತಡದಿಂದ ಅವರ ಸಾಮರ್ಥ್ಯ ಕಡಿಮೆಯಾಗಬಹುದು ಎಂದು ಅವರು ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಬಡ ಮಕ್ಕಳಿಗೆ ವಿದ್ಯಾ ದೇವತೆಯಾದ ಭಾರತೀಯ ಶಿಕ್ಷಕಿಗೆ ವಿಶ್ವ ಮನ್ನಣೆ: ‘ಜಾಗತಿಕ ಶಿಕ್ಷಕ ಪ್ರಶಸ್ತಿ’ ಪಡೆದ ರೂಬಲ್ ನಾಗಿ
ಶಿಕ್ಷಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
