ಸಂಸದ ಡಾ.ಕೆ ಸುಧಾಕರ್​ಗೆ ನೆಲಮಂಗಲದಲ್ಲಿ ಅಭಿನಂದನಾ ಕಾರ್ಯಕ್ರಮ; ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ

Edited By:

Updated on: Jul 07, 2024 | 5:38 PM

ಇಂದು(ಭಾನುವಾರ) ಮೈತ್ರಿ ಪಕ್ಷದಿಂದ ನೆಲಮಂಗಲದಲ್ಲಿ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಕೆ ಸುಧಾಕರ್‌ ಗೆಲುವು ಹಿನ್ನಲೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಕಾರ್ಯಕ್ರಮಕ್ಕೆ ಬಂದವರಿಗೆ ಭರ್ಜರಿ ಬಾಡೂಟ ಜೊತೆಗೆ ಎಣ್ಣೆಯನ್ನು ಕೂಡ ಆಯೋಜಿಸಲಾಗಿತ್ತು.

ಬೆಂಗಳೂರು, ಜು.07: ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಕೆ ಸುಧಾಕರ್‌ ಗೆಲುವು ಹಿನ್ನಲೆ ಇಂದು(ಭಾನುವಾರ) ಮೈತ್ರಿ ಪಕ್ಷದಿಂದ ನೆಲಮಂಗಲದಲ್ಲಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಕಾರ್ಯಕ್ರಮಕ್ಕೆ ಬಂದವರಿಗೆ ಭರ್ಜರಿ ಬಾಡೂಟ ಜೊತೆಗೆ ಎಣ್ಣೆಯನ್ನು ಕೂಡ ಆಯೋಜಿಸಲಾಗಿತ್ತು. ಇನ್ನು ಉಚಿತ ಎಣ್ಣೆಗಾಗಿ ಮುಗಿಬಿದ್ದ ಜನರನ್ನು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಡುವಂತಾಯಿತು. ಈ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ನೆಲಮಂಗಲ ಮಾಜಿ ಶಾಸಕರಾದ ನಾಗರಾಜು, ಮಾಜಿ ಎಂಎಲ್ಸಿ ಇ.ಕೃಷ್ಣಪ್ಪ ಸೇರಿದಂತೆ ಮೈತ್ರಿ  ಪಕ್ಷದ ಹಿರಿಯ ಮುಖಂಡರು, ಮಾಜಿ ಶಾಸಕರು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 07, 2024 04:31 PM
Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More