ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನರಾಗಿದ್ದು, ಅಂತಿಮ ದರ್ಶನ ಹಾಗೂ ಅಂತ್ಯಸಂಸ್ಕಾರದ ಬಗ್ಗೆ ಅವರ ಮಗ ನವೀನ್ ಮಾಹಿತಿ ನೀಡಿದ್ದಾರೆ. ಎಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ? ಯಾವಗ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂಬ ಬಗ್ಗೆ ಅವರು ಮಾಹಿತಿ ನೀಡಿದ್ದು, ಆ ಕುರಿತ ವಿವರ ವಿಡಿಯೋದಲ್ಲಿದೆ.
ಮಂಗಳೂರು, ಜನವರಿ 6: ಕನ್ನಡದ ಹಿರಿಯ ಸಾಹಿತಿ ಡಾ ನಾ ಡಿಸೋಜ ಭಾನುವಾರ ರಾತ್ರಿ 7.50ಕ್ಕೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಇಂದು ಅವರ ಪಾರ್ಥಿವ ಶರೀರವನ್ನು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿರುವ ಅವರ ಸ್ವಗೃಹಕ್ಕೆ ಕೊಂಡೊಯ್ಯಲಾಗುತ್ತಿದೆ. ಇಂದು ಮಧ್ಯಾಹ್ನದಿಂದ ಮಂಗಳವಾರ ಮಧ್ಯಾಹ್ನದ ವೆರೆಗೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಅವರು ಪುತ್ರ ನವೀನ್ ತಿಳಿಸಿದ್ದಾರೆ. ಅಂತಿಮ ದರ್ಶನ, ಅಂತ್ಯಸಂಸ್ಕಾರದ ಬಗ್ಗೆ ಅವರು ನೀಡಿರುವ ಮಾಹಿತಿ ಇಲ್ಲಿದೆ.
ಏತನ್ಮಧ್ಯೆ, ಡಿಸೋಜಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ನಾಡಿನ ಹಿರಿಯ ಸಾಹಿತಿ ನಾ.ಡಿಸೋಜಾ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಸಾಹಿತ್ಯ ಕೃಷಿಯ ಜೊತೆಯಲ್ಲಿ ಪರಿಸರ ರಕ್ಷಣೆಯ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ನಾ.ಡಿಸೋಜಾ ಅವರು ಜನಪರ ಕಾಳಜಿಯ ಲೇಖಕ. ನಾ.ಡಿಸೋಜಾ ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಅವರು ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ