ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

Updated on: Jan 06, 2025 | 10:10 AM

ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನರಾಗಿದ್ದು, ಅಂತಿಮ ದರ್ಶನ ಹಾಗೂ ಅಂತ್ಯಸಂಸ್ಕಾರದ ಬಗ್ಗೆ ಅವರ ಮಗ ನವೀನ್ ಮಾಹಿತಿ ನೀಡಿದ್ದಾರೆ. ಎಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ? ಯಾವಗ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂಬ ಬಗ್ಗೆ ಅವರು ಮಾಹಿತಿ ನೀಡಿದ್ದು, ಆ ಕುರಿತ ವಿವರ ವಿಡಿಯೋದಲ್ಲಿದೆ.

ಮಂಗಳೂರು, ಜನವರಿ 6: ಕನ್ನಡದ ಹಿರಿಯ ಸಾಹಿತಿ ಡಾ ನಾ ಡಿಸೋಜ ಭಾನುವಾರ ರಾತ್ರಿ 7.50ಕ್ಕೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಇಂದು ಅವರ ಪಾರ್ಥಿವ ಶರೀರವನ್ನು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿರುವ ಅವರ ಸ್ವಗೃಹಕ್ಕೆ ಕೊಂಡೊಯ್ಯಲಾಗುತ್ತಿದೆ. ಇಂದು ಮಧ್ಯಾಹ್ನದಿಂದ ಮಂಗಳವಾರ ಮಧ್ಯಾಹ್ನದ ವೆರೆಗೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಅವರು ಪುತ್ರ ನವೀನ್ ತಿಳಿಸಿದ್ದಾರೆ. ಅಂತಿಮ ದರ್ಶನ, ಅಂತ್ಯಸಂಸ್ಕಾರದ ಬಗ್ಗೆ ಅವರು ನೀಡಿರುವ ಮಾಹಿತಿ ಇಲ್ಲಿದೆ.

ಏತನ್ಮಧ್ಯೆ, ಡಿಸೋಜಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ನಾಡಿನ ಹಿರಿಯ ಸಾಹಿತಿ ನಾ.ಡಿಸೋಜಾ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಸಾಹಿತ್ಯ ಕೃಷಿಯ ಜೊತೆಯಲ್ಲಿ ಪರಿಸರ ರಕ್ಷಣೆಯ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ನಾ.ಡಿಸೋಜಾ ಅವರು ಜನಪರ ಕಾಳಜಿಯ ಲೇಖಕ. ನಾ.ಡಿಸೋಜಾ ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಅವರು ಎಕ್ಸ್​ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More