Karnataka Assembly Polls: ಪತಿಗಾಗಿ ಉತ್ತರ ಮತ್ತು ಮಾವನಿಗಾಗಿ ದಕ್ಷಿಣ ದಾವಣಗೆರೆಯಲ್ಲಿ ಪ್ರಚಾರ ಮಾಡುತ್ತಿರುವ ಡಾ ಪ್ರಭಾ ಮಲ್ಲಿಕಾರ್ಜುನ

Updated on: Apr 11, 2023 | 4:27 PM

ಪತಿ ಮತ್ತು ಮಾವ ಇಬ್ಬರಿಗಾಗಿಯೂ ಒಂದೇ ನಗರದ ಎರಡು ಕ್ಷೇತ್ರಗಳಲ್ಲಿ ಒಟ್ಟಿಗೆ ಚುನಾವಣಾ ಪ್ರಚಾರ ಮಾಡಿದ ರಾಜ್ಯದ ಮೊದಲು ಮಹಿಳೆ ಡಾ ಪ್ರಭಾ ಆಗಿರಬಹುದು.

ದಾವಣಗೆರೆ: ನಗರದಲ್ಲಿ ಮನೆಮನೆಗೆ ಭೇಟಿ ನೀಡುತ್ತಾ ಪ್ರಚಾರ ಮಾಡುತ್ತಿರುವ ಇವರು ಡಾ ಪ್ರಭಾ ಮಲ್ಲಿಕಾರ್ಜುನ (Dr Prabha Mallikarjun), ದಾವಣಗೆರೆ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮತ್ತು ಮಾಜಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ (SS Mallikarjun) ಪತ್ನಿ. ಅಂದಹಾಗೆ, ಇವರು ಕೇವಲ ತಮ್ಮ ಪತಿಗಾಗಿ ಪ್ರಚಾರ ಮಾಡುತ್ತಿಲ್ಲ. ಅವರ ಮಾವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶ್ಯಾಮನೂರು ಶಿವಶಂಕರಪ್ಪ (Shamanur Shivashankarappa) ಪರವಾಗಿಯೂ ಮತ ಯಾಚಿಸುತ್ತಿದ್ದಾರೆ. ಶಿವಶಂಕ್ರಪ್ಪನವರು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಪತಿ ಮತ್ತು ಮಾವ ಇಬ್ಬರಿಗಾಗಿಯೂ ಒಂದೇ ನಗರದ ಎರಡು ಕ್ಷೇತ್ರಗಳಲ್ಲಿ ಒಟ್ಟಿಗೆ ಚುನಾವಣಾ ಪ್ರಚಾರ ಮಾಡಿದ ರಾಜ್ಯದ ಮೊದಲು ಮಹಿಳೆ ಡಾ ಪ್ರಭಾ ಆಗಿರಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More