ಆಧಾರ್​​ ಕಾರ್ಡ್​ ತೋರಿಸಿ ದಾವಣಗೆರೆ ಸಿಟಿ ಬಸ್​​ನಲ್ಲಿ ಪ್ರಯಾಣಿಸಿದ ಕಾಂಗ್ರೆಸ್​ ಅಭ್ಯರ್ಥಿ

Edited By:

Updated on: Apr 05, 2024 | 7:47 PM

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಅವರು ಆಧಾರ್​​ ಕಾರ್ಡ್​ ತೋರಿಸುವ ಮೂಲಕ ಬಸ್​​​​ನಲ್ಲಿ ಪ್ರಯಾಣ ಮಾಡಿದ್ದಾರೆ. ಉಚಿತ ಬಸ್​ ಪ್ರಯಾಣದ ಕುರಿತು ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರಿಂದ ಮಾಹಿತಿ ಸಂಗ್ರಹ ಮಾಡಿದ್ದಾರೆ.

ದಾವಣಗೆರೆ, ಏಪ್ರಿಲ್​ 05: ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ (Prabha Mallikarjuna) ಅವರು ಆಧಾರ್​​ ಕಾರ್ಡ್​ ತೋರಿಸುವ ಮೂಲಕ ಬಸ್​​​​ನಲ್ಲಿ ಪ್ರಯಾಣ ಮಾಡಿದ್ದಾರೆ. ಆ ಮೂಲಕ ದಾವಣಗೆರೆಯಲ್ಲಿ ಸಿಟಿ ಬಸ್​​ನಲ್ಲಿ ಪ್ರಯಾಣಿಸಿ ‘ಶಕ್ತಿ ಯೋಜನೆ’ ಮಾಹಿತಿ ಸಂಗ್ರಹಿಸಿದ್ದಾರೆ. ಉಚಿತ ಬಸ್​ ಪ್ರಯಾಣದ ಕುರಿತು ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರಿಂದ ಮಾಹಿತಿ ಸಂಗ್ರಹ ಮಾಡಿದ್ದಾರೆ. ಸರ್ಕಾರದ ಐದು ಗ್ಯಾರಂಟಿ ಅನುಷ್ಠಾನಗಳ ಬಗ್ಗೆ ಬಸ್​​ನಲ್ಲಿ ಮಾಹಿತಿ ಸಂಗ್ರಹಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Apr 05, 2024 07:46 PM
Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More