AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ರಾಜ್​ಕುಮಾರ್ 20ನೇ ವರ್ಷದ ಪುಣ್ಯಸ್ಮರಣೆ: ಅಭಿಮಾನಿಗಳಿಗೆ ಅನ್ನದಾನ

ಡಾ. ರಾಜ್​ಕುಮಾರ್ 20ನೇ ವರ್ಷದ ಪುಣ್ಯಸ್ಮರಣೆ: ಅಭಿಮಾನಿಗಳಿಗೆ ಅನ್ನದಾನ

ಮದನ್​ ಕುಮಾರ್​
|

Updated on: Apr 12, 2026 | 1:48 PM

Share

ದಿಗ್ಗಜ ನಟ ಡಾ. ರಾಜ್​ಕುಮಾರ್ ಅವರು ನಿಧನರಾಗಿ ಇಂದಿಗೆ (ಏ.12) 20 ವರ್ಷಗಳು ಕಳೆದಿವೆ. ಅವರ ಪುಣ್ಯಸ್ಮರಣೆ ಅಂಗವಾಗಿ ಅಪಾರ ಸಂಖ್ಯೆಯ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಸಮಾಧಿಗೆ ನಮಿಸಿದ್ದಾರೆ. ಆಗಮಿಸಿದ ಎಲ್ಲರಿಗೂ ಅನ್ನದಾನದ ವ್ಯವಸ್ಥೆ ಮಾಡಲಾಗಿದೆ. ವಿಡಿಯೋ ಇಲ್ಲಿದೆ ನೋಡಿ..

ಕನ್ನಡ ಚಿತ್ರರಂಗದ ದಿಗ್ಗಜ ನಟ ಡಾ. ರಾಜ್​ಕುಮಾರ್ ಅವರು ನಿಧನರಾಗಿ ಇಂದಿಗೆ (ಏಪ್ರಿಲ್ 12) ಇಪ್ಪತ್ತು ವರ್ಷಗಳು ಕಳೆದಿವೆ. ಅವರ ಪುಣ್ಯಸ್ಮರಣೆ (Death Anniversary) ಅಂಗವಾಗಿ ಅಪಾರ ಸಂಖ್ಯೆಯ ಅಭಿಮಾನಿಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಸಮಾಧಿಗೆ ನಮಿಸಿದ್ದಾರೆ. ಆಗಮಿಸಿದ ಎಲ್ಲರಿಗೂ ಅನ್ನದಾನದ ವ್ಯವಸ್ಥೆ ಮಾಡಲಾಗಿದೆ. ಅಣ್ಣಾವ್ರು ಇಲ್ಲವಾಗಿ 20 ವರ್ಷಗಳು ಕಳೆದರೂ ಕೂಡ ಜನರಿಗೆ ಅವರ ಮೇಲಿನ ಅಭಿಮಾನ ಕಡಿಮೆ ಆಗಿಲ್ಲ. ಮಕ್ಕಳು, ಮಹಿಳೆಯರು ಸೇರಿದಂತೆ ಅಪಾರ ಸಂಖ್ಯೆ ಅಭಿಮಾನಿಗಳು ಇಂದು ಅಣ್ಣಾವ್ರ ಸಮಾಧಿಗೆ ನಮಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷ ಕೂಡ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಡಾ. ರಾಜ್​ಕುಮಾರ್ (Dr Rajkumar) ಕುಟುಂಬದ ಸದಸ್ಯರು ಬಂದು ಸಮಾಧಿಗೆ ಎಡೆ ಇಟ್ಟು ಪೂಜೆ ಸಲ್ಲಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More