AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajkumar Birthday: ರಾಜ್​ಕುಮಾರ್ ಜನ್ಮದಿನ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ

Rajkumar Birthday: ರಾಜ್​ಕುಮಾರ್ ಜನ್ಮದಿನ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ

ರಾಜೇಶ್ ದುಗ್ಗುಮನೆ
|

Updated on: Apr 24, 2024 | 12:15 PM

Share

ಇಂದು ರಾಜ್​ಕುಮಾರ್ ಜನ್ಮದಿನ. ಅವರ ಬರ್ತ್​ಡೇ ಹಿನ್ನೆಲೆಯಲ್ಲಿ ಇಡೀ ಕುಟುಂಬ ಅಣ್ಣಾವ್ರ ಸಮಾಧಿ ಬಳಿ ತೆರಳಿತ್ತು. ಅಶ್ವಿನಿ ಪುನೀತ್ ರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್, ಅವರ ಪತ್ನಿ

ಇಂದು (ಏಪ್ರಿಲ್ 24) ರಾಜ್​ಕುಮಾರ್ (Rajkumar) ಜನ್ಮದಿನ. ಅವರ ಬರ್ತ್​ಡೇ ಹಿನ್ನೆಲೆಯಲ್ಲಿ ಇಡೀ ಕುಟುಂಬ ಅಣ್ಣಾವ್ರ ಸಮಾಧಿ ಬಳಿ ತೆರಳಿತ್ತು. ಅಶ್ವಿನಿ ಪುನೀತ್ ರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್, ಅವರ ಪತ್ನಿ ಸೇರಿ ಅನೇಕರು ರಾಜ್​ಕುಮಾರ್ ಸಮಾಧಿಗೆ ಭೇಟಿ ನಿಡಿದ್ದರು. ಈ ವೇಳೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗಿದೆ. ಊದಿನಕಡ್ಡಿಯಲ್ಲಿ ಆರತಿ ಬೆಳಗಲಾಗಿದೆ. ರಾಜ್​ಕುಮಾರ್ ಸಮಾಧಿಯನ್ನು ಹೂವಿನಿಂದ ಅಲಾಂಕಾರ ಮಾಡಲಾಗಿತ್ತು. ಅಣ್ಣಾವ್ರ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಸಾಕಷ್ಟು ಸಾಮಾಜಿಕ ಕೆಲಸಗಳನ್ನು ಮಾಡುತ್ತಿದ್ದಾರೆ. ರಕ್ತದಾನ, ಅನ್ನದಾನ ಕಾರ್ಯಕ್ರಮಗಳು ನಡೆಯುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More