Rajkumar Birthday: ರಾಜ್ಕುಮಾರ್ ಜನ್ಮದಿನ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ
ಇಂದು ರಾಜ್ಕುಮಾರ್ ಜನ್ಮದಿನ. ಅವರ ಬರ್ತ್ಡೇ ಹಿನ್ನೆಲೆಯಲ್ಲಿ ಇಡೀ ಕುಟುಂಬ ಅಣ್ಣಾವ್ರ ಸಮಾಧಿ ಬಳಿ ತೆರಳಿತ್ತು. ಅಶ್ವಿನಿ ಪುನೀತ್ ರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್, ಅವರ ಪತ್ನಿ
ಇಂದು (ಏಪ್ರಿಲ್ 24) ರಾಜ್ಕುಮಾರ್ (Rajkumar) ಜನ್ಮದಿನ. ಅವರ ಬರ್ತ್ಡೇ ಹಿನ್ನೆಲೆಯಲ್ಲಿ ಇಡೀ ಕುಟುಂಬ ಅಣ್ಣಾವ್ರ ಸಮಾಧಿ ಬಳಿ ತೆರಳಿತ್ತು. ಅಶ್ವಿನಿ ಪುನೀತ್ ರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್, ಅವರ ಪತ್ನಿ ಸೇರಿ ಅನೇಕರು ರಾಜ್ಕುಮಾರ್ ಸಮಾಧಿಗೆ ಭೇಟಿ ನಿಡಿದ್ದರು. ಈ ವೇಳೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗಿದೆ. ಊದಿನಕಡ್ಡಿಯಲ್ಲಿ ಆರತಿ ಬೆಳಗಲಾಗಿದೆ. ರಾಜ್ಕುಮಾರ್ ಸಮಾಧಿಯನ್ನು ಹೂವಿನಿಂದ ಅಲಾಂಕಾರ ಮಾಡಲಾಗಿತ್ತು. ಅಣ್ಣಾವ್ರ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಸಾಕಷ್ಟು ಸಾಮಾಜಿಕ ಕೆಲಸಗಳನ್ನು ಮಾಡುತ್ತಿದ್ದಾರೆ. ರಕ್ತದಾನ, ಅನ್ನದಾನ ಕಾರ್ಯಕ್ರಮಗಳು ನಡೆಯುತ್ತಿವೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.