AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವು ಪ್ರಕರಣ: ಸ್ಫೋಟಕ ವಿಷ್ಯ ಹೇಳಿದ ಪಶುವೈದ್ಯಕೀಯ ಸಂಘದ ಸದಸ್ಯ

ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವು ಪ್ರಕರಣ: ಸ್ಫೋಟಕ ವಿಷ್ಯ ಹೇಳಿದ ಪಶುವೈದ್ಯಕೀಯ ಸಂಘದ ಸದಸ್ಯ

ಅಕ್ಷಯ್​ ಪಲ್ಲಮಜಲು​​
|

Updated on: Mar 24, 2026 | 7:35 PM

Share

ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣದಲ್ಲಿ ಡಿಸಿಎಫ್ ಸಂಪೂರ್ಣ ತಪ್ಪಿದೆ ಎಂದು ಕರ್ನಾಟಕ ಪಶುವೈದ್ಯಕ ಸಂಘ ಆರೋಪಿಸಿದೆ. ಡಿಸಿಎಫ್ ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸಬೇಕು, ವನ್ಯಜೀವಿಗಳಿಗೆ ಪ್ರತ್ಯೇಕ ಪಶುವೈದ್ಯಕೀಯ ವಿಭಾಗ ಸ್ಥಾಪಿಸಬೇಕು ಮತ್ತು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಸಂಘ ಆಗ್ರಹಿಸಿದೆ.

ಅನೇಕಲ್, ಮಾ.24: ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿನ ಕುರಿತು ಕರ್ನಾಟಕ ಪಶುವೈದ್ಯಕ ಸಂಘವು ಗಂಭೀರ ಆರೋಪಗಳನ್ನು ಮಾಡಿದೆ. ಸಂಘದ ಅಧ್ಯಕ್ಷ ಡಾ. ಶಿವಶರಣಪ್ಪ ಎಲ್ಗೊಡ್ ಮಾತನಾಡಿ, ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿಗೆ ಡಿಸಿಎಫ್ ಅವರ ಸಂಪೂರ್ಣ ತಪ್ಪಿದೆ ಎಂದು ಹೇಳಿದ್ದಾರೆ. ಮಧ್ಯರಾತ್ರಿಯಲ್ಲಿ ಯಾವುದೇ ರಕ್ಷಣೆ ಇಲ್ಲದೆ ವನ್ಯಜೀವಿ ಚಿಕಿತ್ಸೆಗೆ ಕಳುಹಿಸಿದ್ದು ದೊಡ್ಡ ತಪ್ಪು. ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಡಿಸಿಎಫ್ ಅವರನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಸಂಘ ಆಗ್ರಹಿಸಿದೆ. ಅಲ್ಲದೆ, ಪಶುವೈದ್ಯರನ್ನು ಕಡಿಮೆ ಸಂಬಳಕ್ಕೆ ಬ್ಲಾಕ್ಮೇಲ್ ಮಾಡಿ ಅಪಾಯಕಾರಿ ಕಾರ್ಯಗಳಿಗೆ ಕಳುಹಿಸಲಾಗುತ್ತಿದೆ. ಇದನ್ನು ತಡೆಯಲು ಅರಣ್ಯ ಇಲಾಖೆಯಲ್ಲಿ ಪ್ರತ್ಯೇಕ ಪಶುವೈದ್ಯಕೀಯ ವಿಭಾಗ ಸ್ಥಾಪಿಸಬೇಕು, ಅವರಿಗೆ ಸೂಕ್ತ ತರಬೇತಿ ಮತ್ತು ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಸಮೀಕ್ಷಾ ರೆಡ್ಡಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರದ ಬೇಡಿಕೆಯನ್ನೂ ಇಡಲಾಗಿದೆ. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ದೊಡ್ಡ ಹೋರಾಟ ನಡೆಸುವುದಾಗಿ ಸಂಘ ಎಚ್ಚರಿಕೆ ನೀಡಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More