AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ಸುಧಾ ಯಾದವ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕಾರ

ಡಾ. ಸುಧಾ ಯಾದವ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕಾರ

ಗಣಪತಿ ಶರ್ಮಾ
|

Updated on:Oct 16, 2026 | 1:06 PM

Share

ಡಾ. ಸುಧಾ ಯಾದವ್ ಅವರು ಕರ್ನಾಟಕದ 20ನೇ ರಾಜ್ಯಪಾಲರಾಗಿ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಪ್ರಮಾಣ ಬೋಧಿಸಿದರು. ನಿರ್ಗಮಿತ ರಾಜ್ಯಪಾಲ ತಾವರ್​ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದರು. ವಿ.ಎಸ್. ರಮಾದೇವಿಯವರ ನಂತರ ಈ ಹುದ್ದೆಗೇರಿದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆ ಇವರದು.

ಬೆಂಗಳೂರು, ಅಕ್ಟೋಬರ್ 16: ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಡಾ. ಸುಧಾ ಯಾದವ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ಡಾ. ಸುಧಾ ಯಾದವ್ ಅವರಿಗೆ ರಾಜ್ಯಪಾಲರಾಗಿ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ, ನಿರ್ಗಮಿತ ರಾಜ್ಯಪಾಲರಾದ ತಾವರ್​​ಚಂದ್ ಗೆಹಲೋಟ್ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಡಾ. ಸುಧಾ ಯಾದವ್ ಅವರು ಕರ್ನಾಟಕದ 20ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದು, ಈ ಹುದ್ದೆಗೇರಿದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ವಿ.ಎಸ್. ರಮಾದೇವಿ ಅವರು ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ಹರಿಯಾಣ ಮೂಲದ 60 ವರ್ಷ ವಯಸ್ಸಿನ ಡಾ. ಸುಧಾ ಯಾದವ್ ಅವರು ಕೆಮಿಸ್ಟ್ರಿಯಲ್ಲಿ ಸ್ನಾತಕೋತ್ತರ ಪದವಿ ಮತ್ತು ಪ್ರತಿಷ್ಠಿತ ಐಐಟಿ ರೂಲ್ಕಿಯಿಂದ ಪಿಎಚ್‌ಡಿ ಪದವಿ ಪಡೆದ ಹಿನ್ನೆಲೆಯುಳ್ಳವರು. ಅವರ ನೇಮಕವು ರಾಜ್ಯಪಾಲರ ಹುದ್ದೆಗೆ ಹೊಸ ಆಯಾಮವನ್ನು ನೀಡಿದೆ.

ಇದನ್ನೂ ಓದಿ: ಕಾರ್ಗಿಲ್​​ ಯುದ್ಧದಲ್ಲಿ ಹುತಾತ್ಮ ಡೆಪ್ಯುಟಿ ಕಮಾಂಡೆಂಟ್ ಪತ್ನಿ ಕರ್ನಾಟಕದ ರಾಜ್ಯಪಾಲೆ: ಸುಧಾ ಯಾದವ್ ವ್ಯಕ್ತಿಚಿತ್ರ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 16, 2026 12:48 PM

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More