AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ರಾಜ್ಯಪಾಲೆ ಡಾ. ಸುಧಾ ಯಾದವ್

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ರಾಜ್ಯಪಾಲೆ ಡಾ. ಸುಧಾ ಯಾದವ್

TV9 Web
| Edited By: |

Updated on: Oct 16, 2026 | 10:09 AM

Share

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಡಾ. ಸುಧಾ ಯಾದವ್ ಅವರು ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ ಭೇಟಿ ನೀಡಿದರು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಹುತಾತ್ಮರ ತ್ಯಾಗವನ್ನು ಸ್ಮರಿಸಿದ ಅವರು, ದೇಶಸೇವೆಯಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಸೈನಿಕರ ಬಲಿದಾನಕ್ಕೆ ಶ್ರದ್ಧಾಂಜಲಿ ಅರ್ಪಿಸಿದರು.

ಬೆಂಗಳೂರು, ಅ.16: ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಡಾ. ಸುಧಾ ಯಾದವ್ ಅವರು ಬೆಂಗಳೂರಿನ ಪ್ರಸಿದ್ಧ ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ ಭೇಟಿ ನೀಡಿ, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಕರ್ನಾಟಕದ ರಾಜ್ಯಪಾಲೆಯಾಗಿ ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಾ. ಸುಧಾ ಯಾದವ್ ಅವರು, ಹುತಾತ್ಮ ಯೋಧರ ತ್ಯಾಗವನ್ನು ಸ್ಮರಿಸುವ ಸಲುವಾಗಿ ನೇರವಾಗಿ ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ ತೆರಳಿದರು. ಸ್ಮಾರಕದ ಬಳಿ ತೆರಳಿದ ಅವರು ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ, ದೇಶ ಸೇವೆಗೈದು ಬಲಿದಾನಗೈದ ವೀರಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
TV9 Web
TV9 Web

TV9 Kannada

Read More