ಶಕ್ತಿ ಯೋಜನೆಯನ್ನು ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರು ಕೊಂಡಾಡಿದರು: ಡಿಕೆ ಶಿವಕುಮಾರ್
ದೇವಸ್ಥಾನದೊಳಗಿದ್ದ ಮಹಿಳೆಯರು ಸಹ ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆ ಬಹಳ ಸಂತಸ ವ್ಯಕ್ತಪಡಿಸಿದರು. ಗೃಹಜ್ಯೋತಿ ಯೋಜನೆಯ ಮೂಲಕ ಮನೆಯಲ್ಲಿ ಬೆಳಕು ಪಸರಿಸಿದೆ ಮತ್ತು ಪ್ರತಿ ತಿಂಗಳು ವಿದ್ಯುತ್ ಬಿಲ್ ಉಳಿತಾಯವಾಗುತ್ತಿದೆ ಎಂದು ಅವರು ತಿಳಿಸಿದರೆಂದು ಶಿವಕುಮಾರ್ ಹೇಳಿದರು.
ಮಂಗಳೂರು: ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದು ಅಲ್ಲಿನ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರ (Dr Veerendra Heggade) ಜೊತೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ರಾಜ್ಯದಲ್ಲಿ ಮಳೆ ಸುರಿಯಲಾರಂಭಿಸಿದೆ, ಈ ಬಾರಿ ಸುಭಿಕ್ಷೆ ಉಂಟಾಗಲಿ ಎಂದು ರಾಜ್ಯದ ಜನತೆಯ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಹೇಳಿದರು. ಡಾ ವೀರೇಂದ್ರ ಹೆಗ್ಗಡೆಯವರು ಸರ್ಕಾರದ ಶಕ್ತಿ ಯೋಜನೆ ಬಗ್ಗೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಯೋಜನೆಯಿಂದಾಗಿ ಪ್ರತಿದಿನ ಸವಿರಾರು ಮಹಿಳೆ ಮಂಜುನಾಥನ ದರ್ಶನಕ್ಕೆಂದು ಧರ್ಮಸ್ಥಳ ಬರುತ್ತಿದ್ದಾರೆ ಮತ್ತು ಕ್ಷೇತ್ರಕ್ಕೆ ಒಳ್ಳೆಯದಾಗುತ್ತಿದೆ ಎಂದರು ಅಂತ ಶಿವಕುಮಾರ್ ಹೇಳಿದರು. ದೇವಸ್ಥಾನದೊಳಗಿದ್ದ ಮಹಿಳೆಯರು ಸಹ ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆ ಬಹಳ ಸಂತಸ ವ್ಯಕ್ತಪಡಿಸಿದರು. ಗೃಹಜ್ಯೋತಿ ಯೋಜನೆಯ ಮೂಲಕ ಮನೆಯಲ್ಲಿ ಬೆಳಕು ಪಸರಿಸಿದೆ ಮತ್ತು ಪ್ರತಿ ತಿಂಗಳು ವಿದ್ಯುತ್ ಬಿಲ್ ಉಳಿತಾಯವಾಗುತ್ತಿದೆ ಎಂದು ಅವರು ತಿಳಿಸಿದರೆಂದು ಶಿವಕುಮಾರ್ ಹೇಳಿದರು. ಮಾತು ಬಿಡದ ಮಂಜುನಾಥ ಮತ್ತು ಕಾಸು ಬಿಡದ ತಿಮ್ಮಪ್ಪ ಎಂಬ ಮಾತಿನಂತೆ ಮಂಜುನಾಥನ ಆಶೀರ್ವಾದ ನಮ್ಮೆಲ್ಲರ ಮೇಲಿದೆ ಎಂದು ಶಿವಕುಮಾರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಪ್ರಜ್ವಲ್ ಎಲ್ಲಿರಬಹುದೆಂದು ಸಿಡಿ ಶಿವುಗೆ ಬಹಳ ಚೆನ್ನಾಗಿಯೇ ಗೊತ್ತಿದೆ: ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಿಡಿ