AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ

ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ

ರಾಜೇಶ್ ದುಗ್ಗುಮನೆ
|

Updated on:Sep 26, 2026 | 3:15 PM

Share

ಕನ್ನಡ ಚಿತ್ರರಂಗದ ಹಿರಿಯ ನಟ 'ಸಾಹಸಸಿಂಹ' ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವ ಸಂಭ್ರಮಕ್ಕೆ ರಾಜಧಾನಿ ಸಂಪೂರ್ಣವಾಗಿ ಸಜ್ಜಾಗಿದೆ. ಈ ಕುರಿತು 'ವಿಷ್ಣು ಸೇನಾ ಸಮಿತಿ'ಯ ಅಧ್ಯಕ್ಷರು ಹಾಗೂ ಕಾರ್ಯಕ್ರಮದ ಪ್ರಮುಖ ಆಯೋಜಕರಾದ ವೀರಕ ಪುತ್ರ ಶ್ರೀನಿವಾಸ್ ಅವರು ಮಾಧ್ಯಮದೊಂದಿಗೆ ಚಿಟ್ ಚಾಟ್ ನಡೆಸಿ, ಕಾರ್ಯಕ್ರಮದ ಸಂಪೂರ್ಣ ವಿವರಗಳನ್ನು ಹಂಚಿಕೊಂಡಿದ್ದಾರೆ.

ಸೆಪ್ಟೆಂಬರ್ 27ರಂದು ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವ ನಡೆಯಲಿದೆ. ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲು ಪ್ಲ್ಯಾನ್ ನಡೆದಿದೆ. ದಾದಾ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಹಾಗೂ ರಾಜಕೀಯ ನಾಯಕರೆಲ್ಲರೂ ಒಂದೇ ವೇದಿಕೆಯಲ್ಲಿ ಸಮ್ಮಿಲನಗೊಳ್ಳಲಿದ್ದಾರೆ.

ಅಮೃತ ಮಹೋತ್ಸವದ ಶುಭಾರಂಭವು ಮುಂಜಾನೆ 6 ಗಂಟೆಗೆ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭವಾಗಲಿದೆ. ಇಲ್ಲಿಂದ ಅತ್ಯಂತ ವಿಜೃಂಭಣೆಯ ಕನ್ನಡ ಧ್ವಜದ ಬೃಹತ್ ಮೆರವಣಿಗೆ ನಡೆಯಲಿದ್ದು, ಸಾವಿರಾರು ಅಭಿಮಾನಿಗಳು ಭಾಗವಹಿಸಲಿದ್ದಾರೆ.

ನಂತರ ಬೆಳಿಗ್ಗೆ 8 ಗಂಟೆಗೆ ಕಾರ್ಯಕ್ರಮದ ಅಧಿಕೃತ ಉದ್ಘಾಟನೆ ನೆರವೇರಲಿದೆ. ಹಿರಿಯ ನಟರಾದ ಶ್ರೀನಾಥ್, ರಮೇಶ್ ಅರವಿಂದ್ ಸೇರಿದಂತೆ ಚಿತ್ರರಂಗದ ಪ್ರಮುಖ ಕಲಾವಿದರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡದವರಿಂದ ವಿಷ್ಣುದಾದಾ ಅವರ ಸಾರ್ವಕಾಲಿಕ ಹಿಟ್ ಗೀತೆಗಳ ಗಾಯನ ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಲಿದೆ.

ಸಂಜೆ ತಾರಾಗಣದ ಸಮ್ಮಿಲನ, ಸಿಎಂ ಭೇಟಿ

ಸಂಜೆಯ ವೇಳೆಗೆ ಕಾರ್ಯಕ್ರಮದ ಕಳೆ ಇನ್ನಷ್ಟು ಹೆಚ್ಚಾಗಲಿದೆ. ರಾಜ್ಯದ ಮುಖ್ಯಮಂತ್ರಿಗಳು, ಸ್ಯಾಂಡಲ್‌ವುಡ್ ಸೂಪರ್ ಸ್ಟಾರ್‌ಗಳಾದ ಕಿಚ್ಚ ಸುದೀಪ್, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ಹಿರಿಯ ನಟಿ ಸುಹಾಸಿನಿ ಸೇರಿದಂತೆ ನಟ-ನಟಿಯರ ಬೃಹತ್ ದಂಡೇ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 26, 2026 03:14 PM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More