AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಬಿಡುಗಡೆಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿದ ಮಹಿಳೆ

ಪ್ರಿಯಕರನ ಬಿಡುಗಡೆಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿದ ಮಹಿಳೆ

ನಯನಾ ರಾಜೀವ್
|

Updated on: Mar 09, 2026 | 9:00 AM

Share

ಮಹಿಳೆಯೊಬ್ಬರು ತನ್ನ ಪ್ರಿಯಕರನ ಬಿಡುಗಡೆಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದಿದೆ. ಯಕರನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮೊಬೈಲ್ ಟವರ್ ಹತ್ತಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಬಂಧಿತ ಪ್ರಿಯಕರನನ್ನು ಸ್ಥಳಕ್ಕೆ ಕರೆತಂದ ನಂತರ ಮಹಿಳೆ ಕೊನೆಗೂ ಕೆಳಗಿಳಿದಿದ್ದಾಳೆ. ಗೋಪಾಲ್‌ಗಂಜ್ ಜಿಲ್ಲೆಯ ಬಂಕಟ ಜಾಗಿರ್ದಾರಿ ಗ್ರಾಮದಲ್ಲಿ ನಡೆದ ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗೋಪಾಲ್​ಗಂಜ್, ಮಾರ್ಚ್ 9: ಮಹಿಳೆಯೊಬ್ಬರು ತನ್ನ ಪ್ರಿಯಕರನ ಬಿಡುಗಡೆಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದಿದೆ. ಯಕರನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮೊಬೈಲ್ ಟವರ್ ಹತ್ತಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಬಂಧಿತ ಪ್ರಿಯಕರನನ್ನು ಸ್ಥಳಕ್ಕೆ ಕರೆತಂದ ನಂತರ ಮಹಿಳೆ ಕೊನೆಗೂ ಕೆಳಗಿಳಿದಿದ್ದಾಳೆ. ಗೋಪಾಲ್‌ಗಂಜ್ ಜಿಲ್ಲೆಯ ಬಂಕಟ ಜಾಗಿರ್ದಾರಿ ಗ್ರಾಮದಲ್ಲಿ ನಡೆದ ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹಿಳೆ ಮತ್ತು ಆಕೆಯ ಪ್ರಿಯಕರ ಪವನ್ ಚೌಹಾಣ್ ಇಬ್ಬರೂ ಗೋಪಾಲ್‌ಗಂಜ್ ಜಿಲ್ಲೆಯ ಬಂಕತಾ ಮಾಲ್ ಗ್ರಾಮದ ನಿವಾಸಿಗಳು. ಗುರುವಾರ ಮಹಿಳೆ ಇದ್ದಕ್ಕಿದ್ದಂತೆ ಕಣ್ಮರೆಯಾದಾಗ, ಆಕೆಯ ಕುಟುಂಬವು ಆಕೆಯನ್ನು ಹುಡುಕಲು ಸಾಧ್ಯವಾಗದ ಕಾರಣ ಪೊಲೀಸ್ ದೂರು ದಾಖಲಿಸಿತು. ಮಹಿಳೆಯನ್ನು ಅಪಹರಿಸಿದ್ದಾನೆಂದು ಶಂಕಿಸಿ, ಪೊಲೀಸರು ಪವನ್‌ನನ್ನು ವಿಚಾರಣೆಗಾಗಿ ತಕ್ಷಣ ವಶಕ್ಕೆ ಪಡೆದಿದ್ದರು. ಪ್ರಿಯಕರನ ಬಂಧನದ ಬಗ್ಗೆ ಮಹಿಳೆಗೆ ತಿಳಿದಾಗ, ಅವರು ಶುಕ್ರವಾರ ಹಳ್ಳಿಯಲ್ಲಿರುವ ಮೊಬೈಲ್ ಟವರ್ ಹತ್ತಿದ್ದಾಳೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Follow Us