AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ ಸಾಕ್ಷಿ ಇಲ್ಲಿದೆ

ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ ಸಾಕ್ಷಿ ಇಲ್ಲಿದೆ

ರಮೇಶ್ ಬಿ. ಜವಳಗೇರಾ
|

Updated on: Apr 21, 2025 | 9:10 PM

ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್​ ಒಬ್ಬರ ಕಾರು ಅಡ್ಡಗಟ್ಟಿ ಕಲ್ಲಿನಿಂದ ಹೊಡೆದು ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ವಿಂಗ್ ಕಮಾಂಡರ್​ ಮೇಲೆ ಯುವಕ ಹಲ್ಲೆ ಮಾಡಿಲ್ಲ. ಬದಲಿಗೆ ವಿಂಗ್ ಕಮಾಂಡ್​ ಯುವಕನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ್ದು, ಡಿಆರ್​ಡಿಓ ಅಧಿಕಾರಿಯ ನಾಟಕ ಸಿಸಿಟಿವಿಯಲ್ಲಿ ಬಟಾಬಯಲಾಗಿದೆ. ವಿಂಗ್ ಕಮಾಂಡರ್​ನ ಕ್ರೌರ್ಯ ಹೇಗಿತ್ತು ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ಏಪ್ರಿಲ್ 21): ಬೆಂಗಳೂರಿನ ಸಿವಿ ರಾಮನ್ ನಗರದ, ಗೋಪಾಲನ್ ಗ್ರ್ಯಾಂಡ್ ಮಾಲ್ ಬಳಿ ವಿಂಗ್ ಕಮಾಂಡರ್‌ ಬೋಸ್ ಮೇಲೆ ಹಲ್ಲೆ ನಡೆದಿದೆ ಎಂಬ ಸುದ್ದಿ ಭಾರೀ ಸದ್ದು ಮಾಡಿದೆ. ಆರಂಭದಲ್ಲಿ ಕನ್ನಡ ಭಾಷಾ ವಿಷಯಕ್ಕಾಗಿ ನಡೆದ ಜಗಳ ಎಂದು ವೈರಲ್ ಆಗಿತ್ತಾದರೂ ಬಳಿಕ ಕಾರು, ಬೈಕಿನ ನಡುವೆ ಡಿಕ್ಕಿಯಾಗಿದ್ದರಿಂದ ಈ ರೀತಿ ವರ್ತಿಸಲಾಗಿದೆ ಎನ್ನಲಾಗಿತ್ತು. ಇನ್ನು ವಿಂಗ್‌ ಕಮಾಂಡರ್‌ ಸ್ವತಃ ವಿಡಿಯೋ ಮೂಲಕ ತನ್ನ ಮೇಲೆ ಕನ್ನಡಿಗನೊಬ್ಬ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡಿದ್ದ. ಮುಖಕ್ಕೆ ರಕ್ತ ಬರಿಸಿಕೊಂಡು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ. ಇದನ್ನೇ ನಂಬಿದ ಪೊಲೀಸರು, ಯುವಕನ ವಿರುದ್ಧ ಎಫ್​​ಐಆರ್ ದಖಲಿಸಿಕೊಂಡು ವಶಕ್ಕೆ ಪಡೆದುಕೊಂಡಿದ್ದರು. ಆದ್ರೆ, ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸ್ಥಳದಲ್ಲಿನ ಸಿಸಿಟಿವಿಯಲ್ಲಿ ಬೋಸ್​ನ ನವರಂಗಿ ಆಟ ಬಟಾಬಯಲಾಗಿದೆ.

ಸಿಸಿಟಿವಿ ದೃಶ್ಯದಲ್ಲಿ ಯುವಕ ಹಲ್ಲೆ ಮಾಡಿಲ್ಲ. ಬದಲಾಗಿ ವಿಂಗ್ ಕಮಾಂಡ್​ ಬೋಸ್ ಯುವಕನ ಮೇಲೆ ಹಲ್ಲೆ ಮಾಡಿದ್ದಾನೆ. ಸ್ಥಳೀಯರು ಎಷ್ಟೇ ಬಿಡಿಸಲು ಪ್ರಯತ್ನಿಸಿದ್ದರೂ ಸಹ ಕೇಳದ ಬೊಸ್​ ಯುವಕನಿಗೆ ಹಿಗ್ಗಾಮುಗ್ಗಾ ಹೊಡೆದಿದ್ದಾನೆ. ಯುವಕ ನೆಲಕ್ಕೆ ಬಿದ್ದರೂ ಸಹ ಕೇಳಿದೇ ಮನಬಂದಂತೆ ಥಳಿಸಿದ್ದಾನೆ. ಅಲ್ಲದೇ ಯುವಕನ ಮೊಬೈಲ್​ ಕಿತ್ತುಕೊಂಡು ಎಸೆದಿದ್ದಾನೆ. ಬೋಸ್​ನ ಕ್ರೌರ್ಯ ಕ್ರೂರವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ.  ಇನ್ನು ವಿಂಗ್ ಕಮಾಂಡರ್​ನ ಕ್ರೌರ್ಯ ಹೇಗಿತ್ತು ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಇದನ್ನು ಓದಿ: ಕನ್ನಡಿಗನಿಗೆ ಹಿಗ್ಗಾಮುಗ್ಗಾ ಥಳಿತ: ಸಿಸಿಟಿವಿಯಲ್ಲಿ ಬಯಲಾಯ್ತು ವಿಂಗ್‌ ಕಮಾಂಡರ್‌ ನವರಂಗಿ ಆಟ