ರನ್ಯಾ ರಾವ್ರನ್ನು ವಶಕ್ಕೆ ಪಡೆದಿರುವ ಡಿಅರ್ಐನವರು ಪೊಲೀಸ್ ಇಲಾಖೆಯೊಂದಿಗೆ ಮಾಹಿತಿ ಶೇರ್ ಮಾಡಿಲ್ಲ: ಪರಮೇಶ್ವರ್
ನಟಿ ರನ್ಯಾ ರಾವ್ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮಗಳು ಅಂತ ಬಹಳಷ್ಟು ಕನ್ನಡಿಗರಿಗೆ ಗೊತ್ತಿಲ್ಲ. ಪೊಲೀಸ್ ಅಧಿಕಾರಿಯ ಕುಟುಂಬ ನಟಿಯೊಂದಿಗೆ ಅಂತರವನ್ನು ಕಾಯ್ದುಕೊಂಡಿದೆ. ಪರಮೇಶ್ವರ್ ಅವರಿಗೆ ರಾಜ್ಯ ಸರ್ಕಾರ ಗುತ್ತಿಗೆಯಲ್ಲಿ ಮುಸಲ್ಮಾನರಿಗೆ ಶೇಕಡ 4 ರಷ್ಟು ಮೀಸಲಾತಿಯನ್ನು ಕಲ್ಪಿಸಲು ಯೋಚಿಸುತ್ತಿರುವ ಬಗ್ಗೆ ಕೇಳಿದಾಗ ಉತ್ತರಿಸದೆ ಅಲ್ಲಿಂದ ತೆರಳುತ್ತಾರೆ.
ಬೆಂಗಳೂರು, ಮಾರ್ಚ್ 5: ಚಿತ್ರನಟಿ ರನ್ಯಾ ರಾವ್ ಅವರನ್ನು ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪದಲ್ಲಿ ಆದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿ ಜೈಲಿಗಟ್ಟಿದ್ದಾರೆ. ಅವರ ಬಳಿ ಸುಮಾರು ₹ 15ಕೋಟಿ ಮೌಲ್ಯದ ಚಿನ್ನ ಪತ್ತೆಯಾಗಿದೆ. ವಿಷಯದ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ (G Parameshwar) ಅವರನ್ನು ಕೇಳಿದಾಗ, ಪೊಲೀಸ್ ಇಲಾಖೆಯಲ್ಲಿ ಡಿಜಿಪಿಯಾಗಿ ಕೆಲಸ ಮಾಡುತ್ತಿರುವ ರಾಮಚಂದ್ರರಾವ್ ಅವರ ಮಗಳು ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ನಲ್ಲ್ಲಿ ಭಾಗಿಯಾಗಿರುವ ಬಗ್ಗೆ ತಮ್ಮ ಇಲಾಖೆಗೆ ಮಾಹಿತಿ ಲಭ್ಯವಾಗಿದೆ. ಡಿಅರ್ಐ ನವರೇ ತನಿಖೆಯನ್ನು ಮಾಡುತ್ತಿರುವುದರಿಂದ ತಮ್ಮ ಇಲಾಖೆಯೊಂದಿಗೆ ಮಾಹಿತಿ ಹಂಚಿಕೊಂಡಿಲ್ಲ, ಪ್ರಕರಣ ತನಿಖಾ ಹಂತದಲ್ಲಿದೆ, ಹಾಗಾಗಿ ಏನನ್ನೂ ಹೇಳಲಾಗದು ಎಂದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಪೊಲೀಸ್ ಅಧಿಕಾರಿ ಮಗಳು ರನ್ಯಾ ರಾವ್ ಜೈಲುಪಾಲು; ಈ ನಟಿ ಹಿನ್ನೆಲೆ ಏನು?