ರನ್ಯಾ ರಾವ್​ರನ್ನು ವಶಕ್ಕೆ ಪಡೆದಿರುವ ಡಿಅರ್​ಐನವರು ಪೊಲೀಸ್ ಇಲಾಖೆಯೊಂದಿಗೆ ಮಾಹಿತಿ ಶೇರ್ ಮಾಡಿಲ್ಲ: ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 05, 2025 | 6:53 PM

ನಟಿ ರನ್ಯಾ ರಾವ್ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮಗಳು ಅಂತ ಬಹಳಷ್ಟು ಕನ್ನಡಿಗರಿಗೆ ಗೊತ್ತಿಲ್ಲ. ಪೊಲೀಸ್ ಅಧಿಕಾರಿಯ ಕುಟುಂಬ ನಟಿಯೊಂದಿಗೆ ಅಂತರವನ್ನು ಕಾಯ್ದುಕೊಂಡಿದೆ. ಪರಮೇಶ್ವರ್ ಅವರಿಗೆ ರಾಜ್ಯ ಸರ್ಕಾರ ಗುತ್ತಿಗೆಯಲ್ಲಿ ಮುಸಲ್ಮಾನರಿಗೆ ಶೇಕಡ 4 ರಷ್ಟು ಮೀಸಲಾತಿಯನ್ನು ಕಲ್ಪಿಸಲು ಯೋಚಿಸುತ್ತಿರುವ ಬಗ್ಗೆ ಕೇಳಿದಾಗ ಉತ್ತರಿಸದೆ ಅಲ್ಲಿಂದ ತೆರಳುತ್ತಾರೆ.

ಬೆಂಗಳೂರು, ಮಾರ್ಚ್ 5: ಚಿತ್ರನಟಿ ರನ್ಯಾ ರಾವ್ ಅವರನ್ನು ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪದಲ್ಲಿ ಆದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿ ಜೈಲಿಗಟ್ಟಿದ್ದಾರೆ. ಅವರ ಬಳಿ ಸುಮಾರು ₹ 15ಕೋಟಿ ಮೌಲ್ಯದ ಚಿನ್ನ ಪತ್ತೆಯಾಗಿದೆ. ವಿಷಯದ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ (G Parameshwar) ಅವರನ್ನು ಕೇಳಿದಾಗ, ಪೊಲೀಸ್ ಇಲಾಖೆಯಲ್ಲಿ ಡಿಜಿಪಿಯಾಗಿ ಕೆಲಸ ಮಾಡುತ್ತಿರುವ ರಾಮಚಂದ್ರರಾವ್ ಅವರ ಮಗಳು ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ನಲ್ಲ್ಲಿ ಭಾಗಿಯಾಗಿರುವ ಬಗ್ಗೆ ತಮ್ಮ ಇಲಾಖೆಗೆ ಮಾಹಿತಿ ಲಭ್ಯವಾಗಿದೆ. ಡಿಅರ್​​​ಐ ನವರೇ ತನಿಖೆಯನ್ನು ಮಾಡುತ್ತಿರುವುದರಿಂದ ತಮ್ಮ ಇಲಾಖೆಯೊಂದಿಗೆ ಮಾಹಿತಿ ಹಂಚಿಕೊಂಡಿಲ್ಲ, ಪ್ರಕರಣ ತನಿಖಾ ಹಂತದಲ್ಲಿದೆ, ಹಾಗಾಗಿ ಏನನ್ನೂ ಹೇಳಲಾಗದು ಎಂದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪೊಲೀಸ್ ಅಧಿಕಾರಿ ಮಗಳು ರನ್ಯಾ ರಾವ್ ಜೈಲುಪಾಲು; ಈ ನಟಿ ಹಿನ್ನೆಲೆ ಏನು?

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.