ಡಿಆರ್ಐನಿಂದ ಭರ್ಜರಿ ಕಾರ್ಯಾಚರಣೆ: ರೈಲಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ
ಬೆಂಗಳೂರಲ್ಲಿ 9 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಡಿಆರ್ಐ ಅಧಿಕಾರಿಗಳು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ ಈ ಡ್ರಗ್ಸ್ ಅನ್ನು ನಾಯಿಯ ಆಹಾರದ ಪ್ಯಾಕೆಟ್‌ಗಳಲ್ಲಿ ಅಡಗಿಸಿರುವುದನ್ನು ಪತ್ತೆ ಹಚ್ಚಿದ್ದಾರೆ. ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು, ಅವರ ಮನೆಯಲ್ಲಿ 70ಕ್ಕೂ ಹೆಚ್ಚು ಸಿಮ್ ಮತ್ತು 40 ಡೆಬಿಟ್ ಕಾರ್ಡ್‌ಗಳು ಸಿಕ್ಕಿವೆ.
ಬೆಂಗಳೂರು, ಮಾರ್ಚ್ 22: ದೆಹಲಿಯಿಂದ ಬೆಂಗಳೂರಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಾಟ ಮಾಡುತ್ತಿದ್ದ 9 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ. DRI ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ನಾಯಿಗೆ ನೀಡುವ ಆಹಾರದ ಪ್ಯಾಕೆಟ್‌ಗಳಲ್ಲಿ ಅಡಗಿಸಿ, ಯಾರಿಗೂ ಅನುಮಾನ ಬಾರದಂತೆ ಇವನ್ನು ಸಾಗಿಸಲು ಪ್ರಯತ್ನಿಸಲಾಗಿತ್ತು. ಮಾಹಿತಿ ಆಧರಿಸಿ ಕಾರ್ಯಪ್ರವೃತ್ತರಾದ ಡಿಆರ್ಐ ಅಧಿಕಾರಿಗಳು ರೈಲಿನಲ್ಲಿಯೇ ಈ ದಂಧೆಯನ್ನು ಪತ್ತೆ ಹಚ್ಚಿ, ಡ್ರಗ್ಸ್ ಸಹಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ ಮತ್ತಿಬ್ಬರನ್ನೂ ಕೂಡ ಅಧಿಕಾರಿಗಳು ಅರೆಸ್ಟ್ ಪಡೆದಿದ್ದಾರೆ. ಬಂಧಿತ ಆರೋಪಿಯ ಬೆಂಗಳೂರಿನ ಮನೆಯಲ್ಲಿ ಶೋಧ ನಡೆಸಿದಾಗ 40 ಡೆಬಿಟ್ ಕಾರ್ಡ್‌ಗಳು ಮತ್ತು 70ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳು ಪತ್ತೆಯಾಗಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Mar 22, 2026 06:53 AM
Loading...
Unable to load recommendations.
Follow Us
