ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರ ಕುಸಿತ: ಜನವರಿ ತಿಂಗಳ ಒಳಗಾಗಿಯೇ ಜಲಕ್ಷಾಮದ ಭೀತಿ

Edited By:

Updated on: Sep 25, 2026 | 8:11 AM

ತಮಿಳುನಾಡಿಗೆ ನಿತ್ಯ 4,000 ಕ್ಯೂಸೆಕ್ ಕಾವೇರಿ ನೀರು ಹರಿಸಲು CWMA ಆದೇಶಿಸಿರುವ ನಡುವೆ ಕೆಆರ್​​ಎಸ್​​ ಸೇರಿದಂತೆ ಕಾವೇರಿ ಜಲಾನಯನದ ನಾಲ್ಕು ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿದಿದ್ದು, ರಾಜ್ಯದಲ್ಲಿ ಜನವರಿ ವೇಳೆಗೆ ಕುಡಿಯುವ ನೀರಿಗೂ ತೀವ್ರ ಹಾಹಾಕಾರ ಎದುರಾಗುವ ಭೀತಿ ಎದುರಾಗಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 4,000 ಕ್ಯೂಸೆಕ್ ನೀರು ಬಿಡಲು CWMA ಆದೇಶಿಸುರುವ ಕಾರಣ ಆತಂಕ ಹೆಚ್ಚಿದೆ.

ಮಂಡ್ಯ, ಸೆಪ್ಟೆಂಬರ್​​ 25: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 4,000 ಕ್ಯೂಸೆಕ್ ನೀರು ಬಿಡಲು CWMA ಆದೇಶದ ಬೆನ್ನಲ್ಲೇ ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಹಾಹಾಕಾರದ ಭೀತಿ ಎದುರಾಗಿದೆ. ಸದ್ಯ ಕೆಆರ್​​ಎಸ್​​ ಜಲಾಶಯದಲ್ಲಿ 27 ಟಿಎಂಸಿ ಮಾತ್ರ ನೀರಿದ್ದರೆ, ಕೆಆರ್‌ಎಸ್, ಕಬಿನಿ, ಹೇಮಾವತಿ ಮತ್ತು ಹಾರಂಗಿ ಜಲಾಶಯಗಳಲ್ಲಿ ಒಟ್ಟು 59 ಟಿಎಂಸಿ ನೀರು ಮಾತ್ರ ಸಂಗ್ರಹವಿದೆ. ಇದರಲ್ಲಿ ಇದರಲ್ಲಿ 39 ಟಿಎಂಸಿ ನೀರು ಮಾತ್ರ ಬಳಕೆಗೆ ಲಭ್ಯವಾಗಲಿದ್ದು, ಈಗ ಅದರಲ್ಲಿ 15 ದಿನ 4 ಸಾವಿರ ಕ್ಯೂಸೆಕ್ ತಮಿಳುನಾಡಿಗೆ ಹರಿದರೆ 5.5 ಟಿಎಂಸಿ ನೀರು ಖಾಲಿಯಾಗಲಿದೆ. ಹೀಗಾಗಿ ಜನವರಿ ತಿಂಗಳ ಒಳಗಾಗಿಯೇ ಹನಿ ನೀರಿಗೂ ಪರದಾಟ ನಡೆಸಬೇಕಾಗಬಹುದೆಂಬ ಮುನ್ಸೂಚನೆ ಸಿಕ್ಕಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 25, 2026 08:10 AM
Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More