Video: ಟ್ರಕ್ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
ಆಂಧ್ರಪ್ರದೇಶದ ಕಾಕಿನಾಡದಲ್ಲಿ ಎರಡು ಟ್ರಕ್ಗಳ ನಡುವೆ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಸಜೀವದಹನವಾಗಿದ್ದಾರೆ. ಕತಿಪುಡಿ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೆಚ್ಚು ವಾಹನಗಳು ಓಡಾಡುವ ಹೆದ್ದಾರಿ, ಪಕ್ಕದ ರಸ್ತೆಯಿಂದ ಟ್ರಕ್ ಒಂದು ಯೂಟರ್ನ್ ತೆಗೆದುಕೊಳ್ಳುವಾಗ ಈ ಅಪಘಾತ ಸಂಭವಿಸಿದೆ. ಎರಡೂ ವಾಹನಗಳು ಡಿಕ್ಕಿ ಹೊಡೆದ ತಕ್ಷಣ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿ ಹರಡುವ ಮೊದಲೇ ಓರ್ವ ಚಾಲಕ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರು. ಆದರೆ ಮತ್ತೊಂದು ಟ್ರಕ್ನಲ್ಲಿದ್ದ ಚಾಲಕನಿಗೆ ಅದು ಸಾಧ್ಯವಾಗಲಿಲ್ಲ.
ಕಾಕಿನಾಡ, ಜನವರಿ 29: ಆಂಧ್ರಪ್ರದೇಶದ ಕಾಕಿನಾಡದಲ್ಲಿ ಎರಡು ಟ್ರಕ್ಗಳ ನಡುವೆ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಸಜೀವದಹನವಾಗಿದ್ದಾರೆ. ಕತಿಪುಡಿ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೆಚ್ಚು ವಾಹನಗಳು ಓಡಾಡುವ ಹೆದ್ದಾರಿ, ಪಕ್ಕದ ರಸ್ತೆಯಿಂದ ಟ್ರಕ್ ಒಂದು ಯೂಟರ್ನ್ ತೆಗೆದುಕೊಳ್ಳುವಾಗ ಈ ಅಪಘಾತ ಸಂಭವಿಸಿದೆ. ಎರಡೂ ವಾಹನಗಳು ಡಿಕ್ಕಿ ಹೊಡೆದ ತಕ್ಷಣ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿ ಹರಡುವ ಮೊದಲೇ ಓರ್ವ ಚಾಲಕ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರು. ಆದರೆ ಮತ್ತೊಂದು ಟ್ರಕ್ನಲ್ಲಿದ್ದ ಚಾಲಕನಿಗೆ ಅದು ಸಾಧ್ಯವಾಗಲಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ