ಅಥಣಿ ಬಳಿ ಕಾಲೇಜು ಬಸ್ ಮತ್ತು ಲಾರಿ ನಡುವೆ ಢಿಕ್ಕಿ, ಎರಡೂ ವಾಹನ ಚಾಲಕರ ದುರ್ಮರಣ, 10 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯ
ಕೆಲ ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿರುವರೆಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಗಾಯಗೊಂಡವರನ್ನು ಅಥಣಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ: ಶನಿವಾರ ಬೆಳ್ಳಂಬೆಳಗ್ಗೆಯೇ ಬೆಳಗಾವಿ ಜಿಲ್ಲೆ ಅಥಣಿ (Athani) ಪಟ್ಟಣದ ಹೊರವಲಯದಲ್ಲಿ ಕಾಲೇಜು ಬಸ್ ಮತ್ತು ಲಾರಿಯೊಂದರ ನಡುವೆ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಎರಡೂ ವಾಹನಗಳ ಚಾಲಕರು (drivers) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಕಾಲೇಜು ಬಸ್ ನಲ್ಲಿದ್ದ ವಿದ್ಯಾರ್ಥಿನಿಯರಲ್ಲಿ (students) 10 ಕ್ಕೂ ಹೆಚ್ಚು ಜನ ತೀವ್ರವಾಗಿ ಗಾಯಗೊಂಡಿದ್ದಾರೆ. ಕೆಲ ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿರುವರೆಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಗಾಯಗೊಂಡವರನ್ನು ಅಥಣಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
Latest Videos