ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್ಕೌಂಟರ್ ನಡೆದಿದ್ದು ಹೇಗೆ?; ಡ್ರೋನ್ ವಿಡಿಯೋ ಇಲ್ಲಿದೆ
ಪುಲ್ವಾಮಾದಲ್ಲಿ ಇಂದು ಮುಂಜಾನೆ ನಡೆದ ಎನ್ಕೌಂಟರ್ನಲ್ಲಿ ಜೈಶ್‌ಗೆ ಸಂಬಂಧಿಸಿದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಸಿಕ್ಕಿತ್ತು. ಎನ್ಕೌಂಟರ್ನಲ್ಲಿ ಮೃತಪಟ್ಟ ಭಯೋತ್ಪಾದಕರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೆಇಎಂ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇವರು ಏಪ್ರಿಲ್ 22ರಂದು 26 ನಾಗರಿಕರನ್ನು ಕೊಂದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾತ್ರ ವಹಿಸಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ತನಿಖೆ ಮಾಡಲಾಗುತ್ತಿದೆ.
ತ್ರಾಲ್, ಮೇ 15: ಜಮ್ಮು ಮತ್ತು ಕಾಶ್ಮೀರದ (Jammu Kashmir) ತ್ರಾಲ್ನಲ್ಲಿ ಪುಲ್ವಾಮಾ ಎನ್ಕೌಂಟರ್ಗೂ ಮುನ್ನ ಕಟ್ಟಡದಲ್ಲಿ ಅಡಗಿಕೊಂಡಿದ್ದ ಜೈಶ್ ಭಯೋತ್ಪಾದಕರನ್ನು ಡ್ರೋನ್ ಸೆರೆಹಿಡಿದಿದೆ. ಜಮ್ಮು ಕಾಶ್ಮೀರದ ಜೈಶ್ ಭಯೋತ್ಪಾದಕರನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡುವ ಮೊದಲು ಅವರು ಅಡಗಿಕೊಳ್ಳುವುದನ್ನು ಡ್ರೋನ್ ದೃಶ್ಯಾವಳಿಗಳು ತೋರಿಸುತ್ತವೆ. ಜೈಶ್-ಎ-ಮೊಹಮ್ಮದ್ (ಜೆಇಎಂ)ನ ಮೂವರು ಭಯೋತ್ಪಾದಕರು ತಮ್ಮ ಅಡಗುತಾಣದಲ್ಲಿ ಅಡಗಿಕೊಂಡಿರುವುದನ್ನು ಡ್ರೋನ್ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಇದನ್ನು ಆಧರಿಸಿಯೇ ಅವರತ್ತ ಗುರಿಯಿಟ್ಟು ಎನ್ಕೌಂಟರ್ ಮಾಡಲಾಗಿದೆ. ಡ್ರೋನ್ ದೃಶ್ಯಾವಳಿಯಲ್ಲಿ ಅವರು ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಆಶ್ರಯ ಪಡೆದು ತಮ್ಮ ಶಸ್ತ್ರಾಸ್ತ್ರಗಳನ್ನು ಹಿಡಿದಿರುವುದನ್ನು ನೋಡಬಹುದು. ಎನ್ಕೌಂಟರ್ನಲ್ಲಿ ಮೃತಪಟ್ಟ ಭಯೋತ್ಪಾದಕರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೆಇಎಂ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪುಲ್ವಾಮಾದಲ್ಲಿ ಇಂದು ಮುಂಜಾನೆ ನಡೆದ ಎನ್ಕೌಂಟರ್ನಲ್ಲಿ ಜೈಶ್‌ಗೆ ಸಂಬಂಧಿಸಿದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಸಿಕ್ಕಿತ್ತು. ಎನ್ಕೌಂಟರ್ನಲ್ಲಿ ಮೃತಪಟ್ಟ ಭಯೋತ್ಪಾದಕರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೆಇಎಂ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇವರು ಏಪ್ರಿಲ್ 22ರಂದು 26 ನಾಗರಿಕರನ್ನು ಕೊಂದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾತ್ರ ವಹಿಸಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ತನಿಖೆ ಮಾಡಲಾಗುತ್ತಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ