ಮನೆಯವರ ಎಲ್ಲರ ಆಯ್ಕೆಯೂ ಒಬ್ಬರೇ​; ಡ್ರೋನ್ ಪ್ರತಾಪ್​ಗೆ ಕಳಪೆ ಪಟ್ಟ

Updated on: Dec 01, 2023 | 9:04 AM

Drone Prathap: ಡ್ರೋನ್ ಪ್ರತಾಪ್ ಅವರು ಮಾಡಿದ ಕೆಲಸದಿಂದ ಅವರ ತಂಡಕ್ಕೆ ಹಿನ್ನಡೆ ಆಗಿದೆ. ಹೀಗಾಗಿ ಅವರಿಗೆ ಎಲ್ಲರೂ ಕಳಪೆ ಪಟ್ಟ ನೀಡಿದ್ದಾರೆ. ಹೀಗಾಗಿ, ಅವರು ಜೈಲು ಸೇರಿದ್ದಾರೆ.

ಡ್ರೋನ್ ಪ್ರತಾಪ್ (Drone Prathap) ಅವರು ಇಷ್ಟು ದಿನ ಎಲ್ಲರಿಂದ ಮೆಚ್ಚುಗೆ ಪಡೆಯುತ್ತಿದ್ದರು. ಆದರೆ, ಈ ವಾರ ಅವರು ಎಡವಿದ್ದಾರೆ. ಓವರ್ ಕಾನ್ಫಿಡೆನ್ಸ್​ನಲ್ಲಿ ಪ್ರತಾಪ್​ ತಂಡದ ನಾಯಕನಾಗಿ ಹಲವು ತಪ್ಪು ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದರಿಂದ ಅವರಿಗೆ ಹಾಗೂ ಅವರ ತಂಡಕ್ಕೆ ಹಿನ್ನಡೆ ಆಗಿದೆ. ಈ ಕಾರಣ ನೀಡಿ ಪ್ರತಾಪ್​ಗೆ ಕಳಪೆ ಪಟ್ಟ ನೀಡಲಾಗಿದೆ. ಇದರ ಪ್ರೋಮೋ ವೈರಲ್ ಆಗಿದೆ. ಅನೇಕರು ಪ್ರತಾಪ್​ಗೆ ಕಳಪೆ ಪಟ್ಟ ನೀಡಿದ್ದು ಸರಿ ಇದೆ ಎಂದು ಹೇಳಿದ್ದಾರೆ. ಈ ಎಪಿಸೋಡ್ ಇಂದು (ಡಿಸೆಂಬರ್ 1) ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More