ಡ್ರೋನ್​ ಪ್ರತಾಪ್​ಗೆ ಮನೆಮಂದಿ ಚುಚ್ಚುಮಾತು; ಎಲ್ಲವನ್ನೂ ಕೇಳಿಸಿಕೊಂಡು ಕಣ್ಣೀರು ಹಾಕಿದ ಸಂಗೀತಾ

Updated on: Jan 19, 2024 | 5:49 PM

ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಡ್ರೋನ್​ ಪ್ರತಾಪ್​ ವಿರುದ್ಧ ಚುಚ್ಚು ಮಾತುಗಳನ್ನು ಆಡಿದ್ದಾರೆ. ಕಾರ್ತಿಕ್​ ಮಹೇಶ್​ ಕೂಡ ಖಾರವಾಗಿ ಮಾತಾಡಿದ್ದಾರೆ. ಅವರ ಮಾತುಗಳನ್ನು ಕೇಳಿಸಿಕೊಂಡು ಸಂಗೀತಾಗೆ ತುಂಬ ನೋವಾಗಿದೆ. ಅವರು ಕಣ್ಣೀರು ಹಾಕಿದ್ದಾರೆ. ಪ್ರತಾಪ್​ ಸಹ ಅಳುತ್ತಲೇ ಪ್ರತಿಕ್ರಿಯೆ ನೀಡಿದ್ದಾರೆ. ಈ ಸೀಸನ್​ನ ಕೊನೆಯ ಕಳಪೆ ಪಟ್ಟ ಅವರಿಗೆ ಸಿಕ್ಕಿದೆ.

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ಇನ್ನು ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಈ ಸೀಸನ್​ನ ಕೊನೆಯ ಕಳಪೆ ಪಟ್ಟ ಡ್ರೋನ್​ ಪ್ರತಾಪ್​ಗೆ ನೀಡಲಾಗಿದೆ. ಕಳಪೆ ನೀಡುವಾಗ ಎಲ್ಲರೂ ಡ್ರೋನ್​ ಪ್ರತಾಪ್​ (Drone Prathap) ವಿರುದ್ಧ ಚುಚ್ಚು ಮಾತುಗಳನ್ನು ಆಡಿದ್ದಾರೆ. 15 ವಾರದ ಜರ್ನಿಯನ್ನು ಪರಿಗಣಿಸಿ ವಿನಯ್​ ಅವರು ಪ್ರತಾಪ್​ನ ಕಳಪೆ ಎಂದಿದ್ದಾರೆ. ಕಾರ್ತಿಕ್​ ಮಹೇಶ್​ ಕೂಡ ಪ್ರತಾಪ್​ ವಿರುದ್ಧ ಖಾರವಾಗಿ ಮಾತಾಡಿದ್ದಾರೆ. ಅವರ ಮಾತುಗಳನ್ನು ಕೇಳಿಸಿಕೊಂಡು ಸಂಗೀತಾ ಶೃಂಗೇರಿಗೆ ತುಂಬ ನೋವಾಗಿದೆ. ಅವರು ಕಣ್ಣೀರು ಹಾಕಿದ್ದಾರೆ. ‘ಇಷ್ಟು ವಾರಗಳ ಕಾಲ ಸಂಗೀತಾ ಅವರು ನನ್ನ ಪರವಾಗಿ ನಿಂತಿದ್ದರು. ಅದಕ್ಕೆ ನಾನು ಋಣಿಯಾಗಿದ್ದೇನೆ’ ಎಂದು ಪ್ರತಾಪ್​ ಕೂಡ ಕಣ್ಣೀರು ಸುರಿಸಿದ್ದಾರೆ. ಅವರನ್ನು ಜೈಲಿಗೆ ಕಳಿಸುವಾಗ ಸಂಗೀತಾ (Sangeetha Sringeri) ಸಮಾಧಾನ ಮಾಡಿದ್ದಾರೆ. ಈ ಸಂಚಿಕೆ ಜ.19ರಂದು ರಾತ್ರಿ 9.30ಕ್ಕೆ ‘ಕಲರ್ಸ್​ ಕನ್ನಡ’ ಚಾನೆಲ್​ ಹಾಗೂ ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಬಿತ್ತರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More