‘ಅತಿ ಹೆಚ್ಚು ನೆಗೆಟಿವ್ ಆಗಿರೋದು ಪ್ರತಾಪ್’; ದೊಡ್ಮನೆಯಲ್ಲಿ ಅಭಿಪ್ರಾಯ ತಿಳಿಸಿದ ಸ್ಪರ್ಧಿಗಳು

Updated on: Dec 25, 2023 | 8:50 AM

ಬಿಗ್ ಬಾಸ್ ಮನೆಯಲ್ಲಿ ಅತಿ ಹೆಚ್ಚು ನೆಗೆಟಿವ್ ವಿಚಾರ ಹರಡುವವರು ಯಾರು ಎನ್ನುವ ಪ್ರಶ್ನೆ ಕೇಳಲಾಗಿದೆ. ಇದಕ್ಕೆ ಅನೇಕರು ಪ್ರತಾಪ್ ಹೆಸರು ತೆಗೆದುಕೊಂಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್ ಅವರು ಉತ್ತಮ ಆಟ ಪ್ರದರ್ಶನ ನೀಡುತ್ತಿದ್ದಾರೆ. ದೊಡ್ಮನೆಯಲ್ಲಿ ಅವರ ಕಾಲೆಳೆಯಲು ಅನೇಕರು ಪ್ರಯತ್ನಿಸುತ್ತಿದ್ದಾರೆ. ಅವರನ್ನು ಮನೆಯಿಂದ ಹೊರ ಹಾಕಬೇಕು ಎಂದು ಅನೇಕರು ನಿರ್ಧರಿಸಿದ್ದಾರೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಬಿಗ್ ಬಾಸ್ (Bigg Boss) ಮನೆಯಲ್ಲಿ ಅತಿ ಹೆಚ್ಚು ನೆಗೆಟಿವ್ ವಿಚಾರ ಹರಡುವವರು ಯಾರು ಎನ್ನುವ ಪ್ರಶ್ನೆ ಕೇಳಲಾಗಿದೆ. ಇದಕ್ಕೆ ಅನೇಕರು ಪ್ರತಾಪ್ ಹೆಸರು ತೆಗೆದುಕೊಂಡಿದ್ದಾರೆ. ಪ್ರತಾಪ್ ಜೊತೆ ಆಪ್ತವಾಗಿದ್ದ ವರ್ತೂರು ಸಂತೋಷ್ ಅವರು ಕೂಡ ತಿರುಗಿ ಬಿದ್ದಿದ್ದಾರೆ. ಇದನ್ನು ಪ್ರತಾಪ್ ಯಾವ ರೀತಿಯಲ್ಲಿ ಸಮರ್ಥಿಸಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More