‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’: ಗೆಲುವಿನಲ್ಲೂ ಸಾರ್ಥಕತೆ ಮೆರೆದ ಡ್ರೋನ್ ಪ್ರತಾಪ್

Updated on: Jul 28, 2025 | 9:49 AM

‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’: ಡ್ರೋನ್ ಪ್ರತಾಪ್ ಅವರು ದಾನಕ್ಕೆ ಹೆಸರುವಾಸಿ ಆದವರು. ಅವರು ಈಗ ಒಂದು ದಾನ ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಈಗ ಡ್ರೋನ್ ಪ್ರತಾಪ್ ಅವರು ಗೆಲುವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಆ ಬಗ್ಗೆ ಈ ಸ್ಟೋರಿಯಲ್ಲಿ ಇದೆ ವಿವರ.

‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆ ನಡೆದಿದೆ. ಇದರಲ್ಲಿ ಸುನೀಲ್ ಗೆದ್ದಿದ್ದಾರೆ. ಈ ವೇಳೆ ಅವರು ತಮ್ಮ ಜೊತೆ ಇದ್ದ ಅಮೃತಾಗೆ ಧನ್ಯವಾದ ಹೇಳಿದರು. ಡ್ರೋನ್ ಪ್ರತಾಪ್ (Drone Prathap) ಅವರು ಎರಡನೇ ರನ್ನರ್ ಅಪ್ ಆದರು. ಅವರಿಗೆ 3 ಲಕ್ಷ ರೂಪಾಯಿ ಹಣ ಸಿಕ್ಕಿದೆ. ತಮ್ಮ ಬೆಂಬಲಕ್ಕೆ ನಿಂತ ಗಗನಾಗೆ ಅವರು ಅರ್ಧ ಹಣ ನೀಡೋದಾಗಿ ಹೇಳಿದರು. ಅವರ ಈ ತ್ಯಾಗದ ಗುಣಕ್ಕೆ ಅನೇಕ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More