ಕೆಎಸ್ಆರ್ಟಿಸಿ ಬಸ್ ಮೇಲೆ ಮದ್ಯದ ಬಾಟಲಿ ಎಸೆತ; ಪ್ರಶ್ನಿಸಿದ ಚಾಲಕನ ಮೇಲೆ ಯುವಕರಿಂದ ಹಲ್ಲೆ
ಮದ್ಯ ಸೇವನೆ ಮಾಡಿದ ಯುವಕರು ಬಾಟಲಿಯನ್ನು ಕೆಎಸ್ಆರ್ಟಿಸಿ ಬಸ್ ಮೇಲೆ ಎಸೆದ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನಲ್ಲಿ ನಡೆದಿದೆ. ಪ್ರಶ್ನಿಸಿದ ಬಸ್ ಚಾಲಕನ ಮೇಲೂ ಯುವಕರು ಹಲ್ಲೆ ನಡೆಸಿದ್ದಾರೆ.
ಚಿಕ್ಕಮಗಳೂರು: ಮದ್ಯ ಸೇವಿಸಿದ್ದ ಯುವಕರು ಕೆಎಸ್ಆರ್ಟಿಸಿ (KSRTC) ಬಸ್ ಮೇಲೆ ಬಾಟಲಿ ಎಸೆದು ಪುಂಡಾಟ ಮೆರೆದಿದ್ದಲ್ಲದೆ ಪ್ರಶ್ನಿಸಿದ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಕಡೂರು (Kadur) ತಾಲೂಕಿನ ಹೋರಿತಿಮ್ಮನಹಳ್ಳಿಯಲ್ಲಿ ನಡೆದಿದೆ. ನಿನ್ನೆ ಸಂಜೆ ನಡೆದಿದ್ದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕುಡಿದು ಕಾರು ಚಲಾಯಿಸುತ್ತಿದ್ದ ನಾಲ್ವರು ಯುವಕರು ಹೋರಿತಿಮ್ಮನಹಳ್ಳಿ ಗೇಟ್ ಬಳಿ ಕೆಎಸ್ಆರ್ಟಿಸಿ ಬಸ್ ಮೇಲೆ ಬಾಟಲ್ ಎಸೆದಿದ್ದಾರೆ. ಪರಿಣಾಮ ಬಸ್ ಮುಂಭಾಗದ ಗಾಜಿಗೆ ಹಾನಿಯಾಗಿದೆ. ಇದನ್ನು ಪ್ರಶ್ನಿಸಿದ ಬಸ್ ಚಾಲಕ ಸತೀಶ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿದ್ದು, ಬೀರೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಿನ್ನೆ ಸಂಜೆ ನಡೆದಿದ್ದ ಘಟನೆಯ ದೃಶ್ಯ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಾದ ಕಿರಣ್, ಸತೀಶ್, ಸಚಿನ್, ಸುಪ್ರೀತ್ ಎಂಬವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಕೆಎಸ್ಆರ್ಟಿಸಿ ಬಸ್ ಚಾಲಕ ಆತ್ಮಹತ್ಯೆ ಯತ್ನಕ್ಕೂ ಮುನ್ನ ಬರೆದಿದ್ದ ಡೆತ್ ನೋಟ್ ಪತ್ತೆ: ಕೃಷಿ ಸಚಿವರ ಹೆಸರು ಉಲ್ಲೇಖ
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ