AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಆಟೋ ಚಾಲಕರ ಹುಚ್ಚಾಟ

KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಆಟೋ ಚಾಲಕರ ಹುಚ್ಚಾಟ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Apr 24, 2026 | 12:30 PM

Share

ಚಿಕ್ಕಮಗಳೂರಿನಲ್ಲಿ ಕುಡಿದ ಅಮಲಿನಲ್ಲಿದ್ದ ಮೂವರು ಆಟೋ ಚಾಲಕರು ರಸ್ತೆ ಮಧ್ಯೆ KSRTC ಬಸ್ ಅಡ್ಡಗಟ್ಟಿ ಕಿರಿಕ್ ಮಾಡಿದ್ದಾರೆ. ಚಾಲಕ ಮನವಿ ಮಾಡಿದರೂ ಕೇಳದೆ ಸೆಲ್ಫಿ ತೆಗೆಯುತ್ತ ಹುಚ್ಚಾಟ ನಡೆಸಿದ ವಿಡಿಯೋ ವೈರಲ್ ಆಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು, ಏಪ್ರಿಲ್​​ 24: ಕುಡಿದ ಅಮಲಿನಲ್ಲಿ KSRTC ಬಸ್​ ಅಡ್ಡಗಟ್ಟಿ ಆಟೋ ಚಾಲಕರು ಕಿರಿಕ್ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ ಕೆ‌ಎಂ ರಸ್ತೆಯಲ್ಲಿ ನಡೆದಿದೆ. ಕಡೂರಿನಿಂದ ಚಿಕ್ಕಮಗಳೂರು KSRTC ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಬಸ್​​ಗೆ ರಸ್ತೆ ಮಧ್ಯೆ ಆಟೋ ಅಡ್ಡಹಾಕಿ ಪುಂಡಾಟ ಮೆರೆಯಲಾಗಿದೆ. ಬಸ್ ಚಾಲಕ ಮನವಿ ಮಾಡಿದ್ರೂ ಜಾಗ ಬಿಡದೆ, ಬಸ್​​ಗೆ ಅಡ್ಡಲಾಗಿ ಆಟೋ ನಿಲ್ಲಿಸಿ ಮೂವರು ಯುವಕರು ಕಿರಿಕ್ ಮಾಡಿದ್ದಾರೆ. ಆಟೋ ನಿಲ್ಲಿಸಿ ಸೆಲ್ಫಿ ತೆಗೆಯುತ್ತಿರುವ ಯುವಕರ ವಿಡಿಯೋ ವೈರಲ್​ ಆಗಿದ್ದು, ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us