ಕುಡಿದು ಕಾರು ಚಲಾಯಿಸಿ ಮಹಿಳೆಯನ್ನು ಎಳೆದೊಯ್ದ ಚಾಲಕ

Updated on: Nov 30, 2024 | 5:42 PM

ಉತ್ತರ ಪ್ರದೇಶದ ಕಾನ್ಪುರದಲ್ಲಿ ಕುಡಿದು ಕಾರು ಚಲಾಯಿಸಿದ ಚಾಲಕ ಬುರ್ಖಾ ಧರಿಸಿದ ಮಹಿಳೆಯನ್ನು ಸ್ವಲ್ಪ ದೂರಕ್ಕೆ ಎಳೆದುಕೊಂಡು ಹೋಗಿದ್ದಾನೆ. ಇದೀಗ ಆತ ತಲೆಮರೆಸಿಕೊಂಡಿದ್ದಾನೆ.

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ತಡರಾತ್ರಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ವೇಳೆ ಕಾರು ಚಾಲಕ ಪಾನಮತ್ತನಾಗಿದ್ದರಿಂದ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಡೆದು ಹೋಗುತ್ತಿದ್ದ ಯುವತಿಗೆ ಡಿಕ್ಕಿ ಹೊಡೆದಿದ್ದಾನೆ. ಕಿರಿದಾದ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ವಸತಿ ಪ್ರದೇಶದಲ್ಲಿ ಚಾಲಕ ಅತಿವೇಗದ ಚಾಲನೆ ಮಾಡಿದ್ದಾನೆ. ಈ ಭೀಕರ ಅಪಘಾತ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More