Hassan: ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯಪಾನ ಮಾಡಿದ್ದ ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ಮನೆಗೆ ನುಗ್ಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಕಾರಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದರೆ, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಗುದ್ದಿದ ರಭಸಕ್ಕೆ ಮನೆಗೆ ತೀವ್ರ ಹಾನಿಯಾಗಿದ್ದು, ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅತಿ ವೇಗ ಮತ್ತು ಮದ್ಯ ಸೇವಿಸಿ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಹಾಸನ, ಫೆಬ್ರವರಿ 19: ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ರಸ್ತೆ ಬದಿಯ ಮನೆಗೆ ನುಗ್ಗಿರುವ ಘಟನೆ ಹಾಸನ ಜಿಲ್ಲೆಯ ಯಲಗುಂದ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರಿಗೆ ಗಂಭೀರ ಗಾಯಗಳಾಗಿದ್ದರೆ, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದ್ದು, ಕಾರಲ್ಲಿದ್ದವರು ಪುರದಮ್ಮ ದೇವಸ್ಥಾನದಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದರು ಎನ್ನಲಾಗಿದೆ. ಕಾರು ಗುದ್ದಿದ ರಭಸಕ್ಕೆ ಮನೆಗೆ ತೀವ್ರ ಹಾನಿಯಾಗಿದ್ದು, ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
