ನನ್ನನ್ನೇ ಕಚ್ಚುತ್ತೀಯ?; ಆಂಧ್ರದಲ್ಲಿ ಕುತ್ತಿಗೆಗೆ ಹಾವು ಸುತ್ತಿಕೊಂಡು ಕುಡುಕನ ಹೈಡ್ರಾಮಾ

Updated on: Sep 10, 2025 | 10:37 PM

ಕುಡಿತದ ಅಮಲಿನಲ್ಲಿ ವ್ಯಕ್ತಿಯೊಬ್ಬ ಹಾವಿನೊಂದಿಗೆ ಆಟವಾಡುತ್ತಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಷಪೂರಿತ ಮತ್ತು ಅಪಾಯಕಾರಿ ಹಾವಿನಿಂದ ತನ್ನನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ಗ್ರಾಮಸ್ಥರ ಮೇಲೆ ಆ ವ್ಯಕ್ತಿ ಹಾವನ್ನು ಎಸೆಯುವುದಾಗಿ ಬೆದರಿಕೆ ಹಾಕುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

ಕೊನಸೀಮಾ, ಸೆಪ್ಟೆಂಬರ್ 10: ಆಂಧ್ರಪ್ರದೇಶದ ಕೊನಸೀಮಾ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಕುಡಿದ ಮತ್ತಿನಲ್ಲಿ (Drunk Man) ವ್ಯಕ್ತಿಯೊಬ್ಬ ಕುತ್ತಿಗೆಗೆ ಹಾವನ್ನು ಸುತ್ತಿಕೊಂಡು ಗ್ರಾಮದಲ್ಲಿ ಆತಂಕ ಸೃಷ್ಟಿಸಿದ್ದಾನೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹಾವಿನೊಂದಿಗೆ ಆಟವಾಡುತ್ತಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಷಪೂರಿತ ಮತ್ತು ಅಪಾಯಕಾರಿ ಹಾವಿನಿಂದ ತಮ್ಮನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ಗ್ರಾಮಸ್ಥರ ಮೇಲೆ ಆ ವ್ಯಕ್ತಿ ಹಾವನ್ನು ಎಸೆಯುವುದಾಗಿ ಬೆದರಿಕೆ ಹಾಕುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ನನ್ನನ್ನೇ ಕಚ್ಚುತ್ತೀಯ? ಎಂದು ಆ ಹಾವಿನೊಂದಿಗೆ ಮಾತನಾಡುತ್ತಾ ಆ ವ್ಯಕ್ತಿ ರಸ್ತೆಯ ತುಂಬ ಓಡಾಡಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published on: Sep 10, 2025 10:33 PM