ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ; ಅಹಮದಾಬಾದ್​ನಲ್ಲಿ 3 ವರ್ಷದ ಮಗು ಸೇರಿ ಇಬ್ಬರು ಸಾವು

ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ; ಅಹಮದಾಬಾದ್​ನಲ್ಲಿ 3 ವರ್ಷದ ಮಗು ಸೇರಿ ಇಬ್ಬರು ಸಾವು

ಸುಷ್ಮಾ ಚಕ್ರೆ
|

Updated on:Dec 25, 2024 | 3:20 PM

ಕುಡಿದ ಅಮಲಿನಲ್ಲಿ ಟ್ರಕ್ ಚಾಲಕ ಅಪಘಾತ ಮಾಡಿದ್ದು, ಅಹಮದಾಬಾದ್‌ನಲ್ಲಿ ವ್ಯಕ್ತಿ ಹಾಗೂ 3 ವರ್ಷದ ಮೊಮ್ಮಗಳು ಮೃತಪಟ್ಟಿದ್ದಾರೆ. ಜನನಿಬಿಡ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಟ್ರಕ್ ಹಿಂದಿನಿಂದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಇಬ್ಬರೂ ಟ್ರಕ್​ನ ಚಕ್ರಗಳ ಕೆಳಗೆ ಬಿದ್ದಿದ್ದಾರೆ. ಇದರ ಪರಿಣಾಮದಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಅಹಮದಾಬಾದ್: ಗುಜರಾತ್​ನ ಅಹಮದಾಬಾದ್‌ನ ಖೋಖ್ರಾದಲ್ಲಿ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 50 ವರ್ಷದ ಜಿತೇಂದ್ರ ಭಾವಸರ್ ಮತ್ತು ಅವರ 3 ವರ್ಷದ ಮೊಮ್ಮಗಳು ಸಾವನ್ನಪ್ಪಿದ್ದಾರೆ. ಕುಡಿದ ಅಮಲಿನಲ್ಲಿ ಟ್ರಕ್ ಚಾಲಕ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮದಿಂದ ಈ ಘಟನೆ ನಡೆದಿದೆ. ಟ್ರಾಫಿಕ್ ಇದ್ದ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಟ್ರಕ್ ಹಿಂದಿನಿಂದ ಬೈಕ್​ಗೆ ಡಿಕ್ಕಿ ಹೊಡೆದಿದ್ದು, ಇಬ್ಬರೂ ಟ್ರಕ್​ನ ಕೆಳಗೆ ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 25, 2024 03:20 PM