ದಾವಣಗೆರೆ: ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

Edited By:

Updated on: Jun 26, 2026 | 10:24 AM

Davanagere News: ದಾವಣಗೆರೆಯ ಶಾಮನೂರು ರಸ್ತೆಯಲ್ಲಿ ಗುರುವಾರ ರಾತ್ರಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಯುವತಿಯೊಬ್ಬಳು ಪೊಲೀಸರ ಮೇಲೆ ದರ್ಪ ತೋರಿದ್ದಾಳೆ. ಕಂಠಪೂರ್ತಿ ಕುಡಿದು ಒನ್‌ವೇನಲ್ಲಿ ಥಾರ್ ಜೀಪ್ ಚಾಲನೆ ಮಾಡುತ್ತಿದ್ದ ಯುವತಿ, ಮಹಿಳಾ PSIಗೆ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ. ಘಟನೆಯ ವಿಡಿಯೋ ಸದ್ಯ ವೈರಲ್ ಆಗಿದೆ.

ದಾವಣಗೆರೆ, ಜೂನ್ 26: ದಾವಣಗೆರೆಯ ಶಾಮನೂರು ರಸ್ತೆಯಲ್ಲಿ ಗುರುವಾರ ರಾತ್ರಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆಯ ವೇಳೆ ಯುವತಿಯೊಬ್ಬಳು ಪೊಲೀಸರೊಂದಿಗೆ ರಂಪಾಟ ನಡೆಸಿದ್ದಾಳೆ. ಅಲ್ಲದೆ, ಕರ್ತವ್ಯ ನಿರತ ಮಹಿಳಾ PSIಗೆ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ. ಯುವತಿಯು ಮದ್ಯಪಾನ ಮಾಡಿದ ಮತ್ತಿನಲ್ಲಿ ಯುವತಿ ಪೋಲಿಸರೊಂದಿಗೆ ವಾಗ್ವಾದ ನಡೆಸಿದ್ದಾಳೆ. ಕಂಠಪೂರ್ತಿ ಕುಡಿದಿದ್ದ ಯುವತಿ, ಒನ್‌ವೇ ರಸ್ತೆಯಲ್ಲಿ ಥಾರ್ ಜೀಪ್ ಚಾಲನೆ ಮಾಡಿಕೊಂಡು ಬರುತ್ತಿದ್ದಳು ಎನ್ನಲಾಗಿದೆ. ಪೊಲೀಸರು ವಾಹನ ನಿಲ್ಲಿಸಲು ಸೂಚಿಸಿದಾಗ, ಯುವತಿ ‘ನಾನು ಕರೆಕ್ಟ್ ಆಗಿ ಇದ್ದೀನಿ, ಯಾಕೆ ಇಲ್ಲಿ ನಿಲ್ಲಬೇಕು’ ಎಂದು ವಾದಿಸಿದ್ದಾಳೆ. ಪೊಲೀಸರು ಆಕೆಗೆ ಪರೀಕ್ಷೆ ಮಾಡಿಸಲು ಹೇಳಿದಾಗಲೂ ಸಹ ನಿರಾಕರಿಸಿದ್ದಾಳೆ.

ಆರೋಪಿಯು ದಾವಣಗೆರೆಯ ಪ್ರತಿಷ್ಠಿತ ವ್ಯಕ್ತಿಯ ಪುತ್ರಿ ಎಂದು ಹೇಳಲಾಗಿದ್ದು, ಸದ್ಯ ಆಕೆಯ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 26, 2026 09:12 AM
Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More