ಕಾಂಗ್ರೆಸ್ ಏಜೆಂಟ್ ರೀತಿ ಹಾಸನ ಡಿಸಿ ವರ್ತನೆ: JDS ಶಾಸಕ ಸ್ವರೂಪ್ ಪ್ರಕಾಶ್ ಆರೋಪ
ಹಾಸನಾಂಬೆ ದರ್ಶನಕ್ಕೆ ಬಂದ ಕುಮಾರಸ್ವಾಮಿ ಅವರಿಗೆ ಕನಿಷ್ಠ ಗೌರವ ತೋರಿಲ್ಲ. ಕಾಂಗ್ರೆಸ್ ಏಜೆಂಟ್ ರೀತಿಯಲ್ಲಿ ಡಿಸಿ ವರ್ತಿಸುತ್ತಿದ್ದಾರೆ ಎಂದು ಜೆಡಿಎಸ್ ಶಾಸಕ ಸ್ವರೂಪ್ ಪ್ರಕಾಶ್ ಆರೋಪಿಸಿದ್ದಾರೆ. ಹಾಸನಾಂಬೆ ದೇಗುಲದ ಬಳಿ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ಮಾತನಾಡಿರುವ ಅವರು, ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕು ಮತ್ತು ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಹಾಸನ, ಅಕ್ಟೋಬರ್ 19: ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಜಿಲ್ಲಾಡಳಿತದಿಂದ ಅವಮಾನವಾಗಿದೆ ಎಂದು ಆರೋಪಿಸಿ ಜೆಡಿಎಸ್ (JDS) ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕು ಮತ್ತು ಬಹಿರಂಗ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದ್ದಾರೆ. ಹಾಸನಾಂಬೆ ದರ್ಶನಕ್ಕೆ ಬಂದ ಕುಮಾರಸ್ವಾಮಿ ಅವರಿಗೆ ಕನಿಷ್ಠ ಗೌರವ ತೋರಿಲ್ಲ. ಕಾಂಗ್ರೆಸ್ ಏಜೆಂಟ್ ರೀತಿಯಲ್ಲಿ ಡಿಸಿ ವರ್ತಿಸುತ್ತಿದ್ದು, ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ವೇದಿಕೆ ಮೇಲೆ ಸ್ಥಾನ ನೀಡಲಾಗಿದೆ. ಆದರೆ ಶಾಸಕನಾಗಿರುವ ನನ್ನ ವೇದಿಕೆಗೆ ಕರೆದಿಲ್ಲ ಎಂದು ಸ್ವರೂಪ್ ಪ್ರಕಾಶ್ ಆರೋಪಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
