ಮೊದಲ ಬಾರಿ ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ

Updated on: Apr 08, 2025 | 5:22 PM

ದುಬೈ ಕ್ರೌನ್ ಪ್ರಿನ್ಸ್ ಮತ್ತು ಯುಎಇ ರಕ್ಷಣಾ ಸಚಿವ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು ಇಂದು ಭಾರತೀಯ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉನ್ನತ ಮಟ್ಟದ ಸಭೆಯ ಮೂಲಕ 2 ದಿನಗಳ ತಮ್ಮ ಭಾರತದ ಭೇಟಿಯನ್ನು ಪ್ರಾರಂಭಿಸಿದರು. ಇದು ಭಾರತಕ್ಕೆ ಅವರ ಮೊದಲ ಅಧಿಕೃತ ಪ್ರವಾಸವಾಗಿದೆ. ಭಾರತ-ಯುಎಇ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುನ್ನಡೆಸುವಲ್ಲಿ ದುಬೈ ಪ್ರಮುಖ ಪಾತ್ರ ವಹಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ನವದೆಹಲಿ, ಏಪ್ರಿಲ್ 8: ದುಬೈ ರಾಜಕುಮಾರ ಶೇಖ್ ಹಮ್ದಾನ್ (Dubai Crown Prince Sheikh Hamdan) ತಮ್ಮ ಮೊದಲ ಅಧಿಕೃತ ಭೇಟಿಯಾಗಿ ಭಾರತಕ್ಕೆ ಆಗಮಿಸಿದ್ದಾರೆ. ಭಾರತಕ್ಕೆ ಆಗಮಿಸಿದ ದುಬೈನ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಭಾರತೀಯ ಸಾಂಪ್ರದಾಯಿಕ ಶೈಲಿಯಲ್ಲಿ ಸ್ವಾಗತ ಕೋರಲಾಯಿತು. ಶೇಖ್ ಹಮ್ದಾನ್ ದೆಹಲಿ ವಿಮಾನ ನಿಲ್ದಾಣದಲ್ಲಿ ಚಂಡೆ ವಾದ್ಯವನ್ನು ವೀಕ್ಷಿಸಿದರು. ಅವರು ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯಲ್ಲಿ ದೆಹಲಿಗೆ ಬಂದಿದ್ದಾರೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ