Duleep Trophy 2024: ಅಮೋಘ ಶತಕ ಸಿಡಿಸಿದ ರೋಹಿತ್ ನೆಚ್ಚಿನ ಆಟಗಾರ
Duleep Trophy 2024: ಪ್ರಸ್ತುತ ನಡೆಯುತ್ತಿರುವ ದುಲೀಪ್ ಟ್ರೋಫಿ 2024 ರ ಎರಡನೇ ಸುತ್ತಿನ ಪಂದ್ಯದಲ್ಲಿ ಭಾರತ ಎ ತಂಡವನ್ನು ಪ್ರತಿನಿಧಿಸುತ್ತಿರುವ ತಿಲಕ್ ವರ್ಮಾ ಅಮೋಘ ಶತಕ ಬಾರಿಸಿದ್ದಾರೆ. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ನ ಭವಿಷ್ಯದ ನಾಯಕ ಎಂದು ಪರಿಗಣಿಸಲ್ಪಟ್ಟ ತಿಲಕ್ ವರ್ಮಾ ಅವರು ಭಾರತ ಡಿ ವಿರುದ್ಧ ನಡೆಯುತ್ತಿರುವ ಈ ಪಂದ್ಯದಲ್ಲಿ ಶತಕ ಬಾರಿಸಿದರು.
ಪ್ರಸ್ತುತ ನಡೆಯುತ್ತಿರುವ ದುಲೀಪ್ ಟ್ರೋಫಿ 2024 ರ ಎರಡನೇ ಸುತ್ತಿನ ಪಂದ್ಯದಲ್ಲಿ ಭಾರತ ಎ ತಂಡವನ್ನು ಪ್ರತಿನಿಧಿಸುತ್ತಿರುವ ತಿಲಕ್ ವರ್ಮಾ ಅಮೋಘ ಶತಕ ಬಾರಿಸಿದ್ದಾರೆ. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ನ ಭವಿಷ್ಯದ ನಾಯಕ ಎಂದು ಪರಿಗಣಿಸಲ್ಪಟ್ಟ ತಿಲಕ್ ವರ್ಮಾ ಅವರು ಭಾರತ ಡಿ ವಿರುದ್ಧ ನಡೆಯುತ್ತಿರುವ ಈ ಪಂದ್ಯದಲ್ಲಿ ಶತಕ ಬಾರಿಸಿದರು. ಈ ಮೂಲಕ ಪಂದ್ಯದ ಮೂರನೇ ದಿನ ಭಾರತ ಎ ತಂಡ, ಭಾರತ ಡಿ ವಿರುದ್ಧ 500 ರನ್‌ಗಳ ಮುನ್ನಡೆ ಸಾಧಿಸಿದೆ.
177 ಎಸೆತಗಳಲ್ಲಿ ಶತಕ
ಎರಡನೇ ದಿನ ಅಂದರೆ ಸೆಪ್ಟೆಂಬರ್ 13 ರ ಸಂಜೆ, ಮಯಾಂಕ್ ಅಗರ್ವಾಲ್ ಔಟಾದ ನಂತರ, ತಿಲಕ್ ವರ್ಮಾ ಕ್ರೀಸ್‌ನಲ್ಲಿ ಬ್ಯಾಟಿಂಗ್‌ಗೆ ಬಂದರು. ದಿನದಾಟದ ಅಂತ್ಯದ ನಂತರ ಅವರು ಅಜೇಯರಾಗಿ ಮರಳಿದರು. ಮೂರನೇ ದಿನ 177 ಎಸೆತಗಳಲ್ಲಿ ಶತಕ ಪೂರೈಸಿದ ತಿಲಕ್ ಅವರ ಶತಕದ ಇನ್ನಿಂಗ್ಸ್‌ನಲ್ಲಿ ಒಂಬತ್ತು ಬೌಂಡರಿಗಳೂ ಸೇರಿದ್ದವು. 2020-21ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಎರಡು ಶತಕಗಳನ್ನು ಬಾರಿಸುವ ಮೂಲಕ ಸಂಚಲನ ಮೂಡಿಸಿದ್ದ ತಿಲಕ್ ವರ್ಮಾ, ಭಾರತ ತಂಡದ ಪರ ಇದುವರೆಗೆ ನಾಲ್ಕು ಏಕದಿನ ಮತ್ತು 16 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.
ಇದೀಗ ಬಹಳ ದಿನಗಳ ನಂತರ ಕ್ರಿಕೆಟ್ ಅಂಗಳಕ್ಕೆ ಕಾಲಿಟ್ಟಿರುವ ತಿಲಕ್ ವರ್ಮಾ ಅವರು ಕೊನೆಯ ಬಾರಿಗೆ ಐಪಿಎಲ್ 2024 ರಲ್ಲಿ ಕಾಣಿಸಿಕೊಂಡಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಈ ಎಡಗೈ ಬ್ಯಾಟ್ಸ್‌ಮನ್ 33 ಎಸೆತಗಳಲ್ಲಿ 10 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು ತಿಲಕ್‌ಗಿಂತ ಮೊದಲು, ಅದೇ ಇನ್ನಿಂಗ್ಸ್‌ನಲ್ಲಿ ಭಾರತ ಎ ಪರ ಪ್ರಥಮ್ ಸಿಂಗ್ ಕೂಡ ಶತಕ ಗಳಿಸಿದ್ದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ