ಅಭಿಮಾನಿಗಳ ಬಳಿ ದುನಿಯಾ ವಿಜಯ್ ವಿಶೇಷ ಮನವಿ

Updated on: Jan 14, 2024 | 9:59 PM

Duniya Vijay: ದುನಿಯಾ ವಿಜಯ್ ತಮ್ಮ ಹುಟ್ಟುಹಬ್ಬವನ್ನು ಜನವರಿ 20ರಂದು ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ಆಚರಿಸಿಕೊಳ್ಳಲಿದ್ದಾರೆ. ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿದ್ದಾರೆ.

ದುನಿಯಾ ವಿಜಯ್ (Duniya Vijay) ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಟ್ಟಿಗೆ ಆಚರಿಸಿಕೊಳ್ಳಲಿದ್ದಾರೆ. ಜನವರಿ 20ರಂದು ಅಭಿಮಾನಿಗಳನ್ನು ಭೇಟಿ ಮಾಡಲಿದ್ದಾರೆ. ತಮ್ಮ ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ದುನಿಯಾ ವಿಜಯ್, ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿದರು. ಯಾವ ಅಭಿಮಾನಿಗಳು ಸಹ ಈ ಬಾರಿ ನಡೆದುಕೊಂಡು ಬರಬೇಡಿ, ಸುರಕ್ಷಿತವಾಗಿ ವಾಹನಗಳಲ್ಲಿ ಬಂದು ಸುರಕ್ಷಿತವಾಗಿ ಹೋಗಿ. ಕೇಕ್, ಹಾರ ತರಬೇಡಿ, ನಿಮ್ಮೊಂದಿಗೆ ಕೂತು ಊಟ ಮಾಡುವ ಆಸೆ ಅಷ್ಟೆ ನನಗೆ. ನೀವು ಸುರಕ್ಷಿತವಾಗಿರುವುದೇ ನನಗೆ ಬೇಕಾಗಿರುವುದು ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More